Featured

ಪೊಲೀಸ್ ಠಾಣೆ ಮುಂಭಾಗ ತಾಯಿಗೆ ಬೆಂಕಿ ಹಚ್ಚಿದ ಮಗ – vishwanews24

ಪೊಲೀಸ್ ಠಾಣೆ ಮುಂಭಾಗ ತಾಯಿಗೆ ಬೆಂಕಿ ಹಚ್ಚಿ ವಿಡಿಯೋ ರೆಕಾರ್ಡ್ ಮಾಡಿದ ಮಗ

ಅಲಿಘಡ:  ಮನೆಯಲ್ಲಿ ಪ್ರತಿ ದಿನ ಆಸ್ತಿಗಾಗಿ ಜಗಳ. ಹೀಗಾಗಿ ಪೊಲೀಸ್ ಠಾಣೆಗೆ ತಾಯಿ ಹಾಗೂ ಮಗ ಆಗಮಿಸಿದ್ದಾರೆ. ಕೆಲ ಹೊತ್ತಿನ ಬಳಿಕ ಪೊಲೀಸ್ ಠಾಣೆಯಿಂದ ಹೊರಬದ ತಾಯಿ ಮಗ ವಾಗ್ವಾದ ನಡೆಸಿದ್ದಾರೆ. ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚುವ ಬೆದರಿಕೆ ಹಾಕಿದ ತಾಯಿಗೆ ಮನಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಬಳಿಕ ಈ ವಿಡಿಯೋವನ್ನು ರೆಕಾರ್ಡ್ ಮಾಡಿದ ಅತ್ಯಂತ ಹೇಯ ಘಟನೆ ಉತ್ತರ ಪ್ರದೇಶದ ಅಲಿಘಡದಲ್ಲಿ ನಡದಿದೆ.

ತಾಯಿ ಹಾಗೂ ಮಗನ ನಡುವೆ ಆಸ್ತಿಗಾಗಿ ಜಗಳ ಶುರುವಾಗಿದೆ. ಈ ಕುರಿತು ಕುಟುಂಬಸ್ಥರು ಮಧ್ಯಪ್ರವೇಶಿದರೂ ಮಗ ಆಸ್ತಿಗೆ ಪಟ್ಟು ಹಿಡಿದಿದ್ದಾನೆ. ತಾಯಿ ಆಸ್ತಿ ಮಗನಿಗೆ ನೀಡಲು ನಿರಾಕರಿಸಿದ್ದಳು. ಹೀಗಾಗಿ ಜಗಳ ತಾರಕಕ್ಕೇರಿತ್ತು. ಕುಟುಂಬಸ್ಥರು ಮಾತುಕತೆ ನಡೆಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ದೂರು ನೀಡಲಾಗಿತ್ತು.

ತಾಯಿ, ಮಗ ಹಾಗೂ ಕುಟುಂಬಸ್ಥರು ಖೈರ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಕುಟುಂಬಸ್ಥರು ಹಾಗೂ ತಾಯಿ ಮಗ ಪೊಲೀಸ್ ಠಾಣೆಯಲ್ಲಿ ಆಸ್ತಿ ಹಂಚಿಕೆ ವಿಚಾರದ ಮಾತುಕತೆ ಆರಂಭಿಸಿದ್ದಾರೆ. ಕೆಲ ಹೊತ್ತಿನ ಬಳಿಕ ತಾಯಿ ಹಾಗೂ ಮಗ ಪೊಲೀಸ್ ಠಾಣೆಯಿಂದ ಹೊರಬಂದಿದ್ದಾರೆ. ಬಳಿಕ ಠಾಣೆಯ ಬದಿಯಲ್ಲಿ ನಿಂತು ವಾಗ್ವಾದ ಆರಂಭಿಸಿದ್ದಾರೆ.

ಈ ವೇಳೆ ತಾಯಿ ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚವುದಾಗಿ ಬೆದರಿಸಿದ್ದಾಳೆ. ಪೊಲೀಸರಿಗೆ ಹೇಳುವುದಾಗಿ ಮಗನ ಬೆದರಿಸಲು ನೋಡಿದ್ದಾರೆ. ಆದರೆ ಪಿತ್ತ ನೆತ್ತಿಗೇರಿದ್ದ ಮಗ ಬೆಂಕಿಯ ಕಿಡಿ ಹೊತ್ತಿಸಿದ್ದಾನೆ. ಪರಿಣಾಮ ಒಂದೇ ಸಮನೆ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಧಗಧನೆ ಹೊತ್ತಿ ಉರಿದಿದೆ. ಪೊಲೀಸರು ಓಡೋಡಿ ಬಂದು ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಈ ಪ್ರಯತ್ನಗಳು ಕೆಲ ನಿಮಿಷಗಳ ವರೆಗೆ ನಡೆದಿದೆ.

ಠಾಣೆ ಒಳಗಿದ್ದ ಪೊಲೀಸರು ಟೇಬಲ್ ಮೇಲೆ, ಠಾಣೆಯಲ್ಲಿರುವ ಜೈಲಿನೊಳಗೆ ನೀಡವು ಬೆಡ್ ಶೀಟ್ ಹೊತ್ತು ತಂದು ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲಿ ಬಹುತೇಕ ದೇಹದ ಭಾಗ ಸುಟ್ಟು ಹೋಗಿದೆ. ಇತ್ತ ಲೈಟರ್ ಮೂಲಕ ಬೆಂಕಿ ಹಚ್ಚಿದ ಮಗ ಬಳಿಕ ವಿಡಿಯೋ ರೆಕಾರ್ಡ್ ಮಾಡಿ ವಿಕೃತಿ ಮೆರೆದಿದ್ದಾನೆ. ತಕ್ಷಣವೇ ಮಹಿಳೆಯನ್ನು ಪೊಲೀಸರು ಆಸ್ಪತ್ರೆ ದಾಖಲಿಸಿದ್ದಾರೆ. ಶೇಕಡಾ 40 ರಷ್ಟು ಮಹಿಳೆ ದೇಹ ಸುಟ್ಟು ಹೋಗಿದೆ. ಥಮಿಕ ತನಿಕೆಯಲ್ಲಿ ಮಗ ಬೆಂಕಿ ಹಚ್ಚುತ್ತಿರುವ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಕಲೆ ಹಾಕಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago