ಕಾಪು: ಇತ್ತೀಚಿಗೆ ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿರುವ ಯುವಕನ ತಂದೆಯೂ, ಮಣಿಪುರದ ಬಿಜೆಪಿ ಮುಖಂಡ ಎಂದು ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಅವರು ಬಿಜೆಪಿ ಸದಸ್ಯರೇ ಅಲ್ಲ ಎಂದು ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆರೋಪಿಯ ತಂದೆಯೂ ಬಿಜೆಪಿಯ ಸ್ಥಳೀಯ ಮಟ್ಟದಲ್ಲಿಯೂ ಕಾರ್ಯಕರ್ತ ಅಥವಾ ಸದಸ್ಯನಾಗಿಲ್ಲ. ಅವರಿಗೂ ಬಿಜೆಪಿ ಪಕ್ಷಕ್ಕೂ ಯಾವುದೇ ಸಂಬ0ಧವಿಲ್ಲ.
ಅಲ್ಲದೇ ಜಿಲ್ಲಾಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸರಕಾರಿ ಬಂಗಲೆಯ ನವೀಕರಣದ ಕಾಮಗಾರಿಯ ಗುತ್ತಿಗೆಯನ್ನು ಪಡೆದಿದ್ದರು.ಅವರು ಬಿಜೆಪಿಯವರಾಗಿದ್ದರೇ, ಉಸ್ತುವಾರಿ ಸಚಿವೆ ಅವರ ಬಂಗಲೆಯ ನವೀಕರಣ ಕಾಮಗಾರಿಯ ಗುತ್ತಿಗೆ ದೊರಕುತ್ತಿತ್ತೇ ಎಂದು ಪ್ರಶ್ನಿಸಿದ್ದಾರೆ.
ಪೋಕ್ಸೊ ಪ್ರಕರಣವೊಂದರಲ್ಲಿ ಬಿಜೆಪಿ ಮುಖಂಡನ ಪುತ್ರ ಎಂದು ಸುಳ್ಳು ಸುದ್ದಿ ಹರಡಿದ ಸಾಮಾಜಿಕ ಜಾಲತಾಣ ಹಾಗೂ ವೆಬ್‌ಸೈಟ್‌ಗಳಲ್ಲಿ ಕಾಂಗ್ರೆಸ್ ಪಕ್ಷವು ಸುಳ್ಳು ಮಾಹಿತಿಯನ್ನು ಹರಡುವ ಮೂಲಕ ಕೀಳು ಮಟ್ಟದ ರಾಜಕೀಯವನ್ನು ಮಾಡುತ್ತಿದ್ದೆ. ರಾಷ್ಟ್ರೀಯ ಪಕ್ಷಕ್ಕೆ ಭಾಜಪಕ್ಕೆ ಸ್ಥಳೀಯ ಮಟ್ಟದಲ್ಲಿ ಮಸಿ ಬಳಿಯುವ ಕಾಂಗ್ರೆಸಿನ ಯತ್ನವು ಫಲ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…