Featured

ಪೋಕ್ಸೊ ಪ್ರಕರಣದಲ್ಲಿ ಕಾಂಗ್ರೆಸ್ ನಿಂದ ಅಪಪ್ರಚಾರ ; ಬಂಧಿತನ ತಂದೆ ಬಿಜೆಪಿ ಸದಸ್ಯನೇ ಅಲ್ಲ : ಕಾಪು ಮಂಡಲ ಬಿಜೆಪಿ – vishwanews24

ಪೋಕ್ಸೊ ಪ್ರಕರಣದಲ್ಲಿ ಕಾಂಗ್ರೆಸ್ ನಿಂದ ಅಪಪ್ರಚಾರ ; ಬಂಧಿತನ ತಂದೆ ಬಿಜೆಪಿ ಸದಸ್ಯನೇ ಅಲ್ಲ : ಕಾಪು ಮಂಡಲ ಬಿಜೆಪಿ

ಕಾಪು: ಇತ್ತೀಚಿಗೆ ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿರುವ ಯುವಕನ ತಂದೆಯೂ, ಮಣಿಪುರದ ಬಿಜೆಪಿ ಮುಖಂಡ ಎಂದು ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಅವರು ಬಿಜೆಪಿ ಸದಸ್ಯರೇ ಅಲ್ಲ ಎಂದು ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರೋಪಿಯ ತಂದೆಯೂ ಬಿಜೆಪಿಯ ಸ್ಥಳೀಯ ಮಟ್ಟದಲ್ಲಿಯೂ ಕಾರ್ಯಕರ್ತ ಅಥವಾ ಸದಸ್ಯನಾಗಿಲ್ಲ. ಅವರಿಗೂ ಬಿಜೆಪಿ ಪಕ್ಷಕ್ಕೂ ಯಾವುದೇ ಸಂಬ0ಧವಿಲ್ಲ.

ಅಲ್ಲದೇ ಜಿಲ್ಲಾಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  ಅವರ ಸರಕಾರಿ ಬಂಗಲೆಯ ನವೀಕರಣದ ಕಾಮಗಾರಿಯ ಗುತ್ತಿಗೆಯನ್ನು ಪಡೆದಿದ್ದರು.ಅವರು ಬಿಜೆಪಿಯವರಾಗಿದ್ದರೇ, ಉಸ್ತುವಾರಿ ಸಚಿವೆ ಅವರ ಬಂಗಲೆಯ ನವೀಕರಣ ಕಾಮಗಾರಿಯ ಗುತ್ತಿಗೆ ದೊರಕುತ್ತಿತ್ತೇ ಎಂದು ಪ್ರಶ್ನಿಸಿದ್ದಾರೆ.

ಪೋಕ್ಸೊ ಪ್ರಕರಣವೊಂದರಲ್ಲಿ ಬಿಜೆಪಿ ಮುಖಂಡನ ಪುತ್ರ ಎಂದು ಸುಳ್ಳು ಸುದ್ದಿ ಹರಡಿದ ಸಾಮಾಜಿಕ ಜಾಲತಾಣ ಹಾಗೂ ವೆಬ್‌ಸೈಟ್‌ಗಳಲ್ಲಿ ಕಾಂಗ್ರೆಸ್ ಪಕ್ಷವು ಸುಳ್ಳು ಮಾಹಿತಿಯನ್ನು ಹರಡುವ ಮೂಲಕ ಕೀಳು ಮಟ್ಟದ ರಾಜಕೀಯವನ್ನು ಮಾಡುತ್ತಿದ್ದೆ. ರಾಷ್ಟ್ರೀಯ ಪಕ್ಷಕ್ಕೆ ಭಾಜಪಕ್ಕೆ ಸ್ಥಳೀಯ ಮಟ್ಟದಲ್ಲಿ ಮಸಿ ಬಳಿಯುವ ಕಾಂಗ್ರೆಸಿನ ಯತ್ನವು ಫಲ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

5 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

7 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

7 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

7 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

7 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

7 hours ago