Featured

ಪೋಕ್ಸೋ ಪ್ರಕರಣದಲ್ಲಿ ನಿರಪರಾಧಿಯನ್ನು ಬಂಧಿಸಿದ ಮಹಿಳಾ ಪೊಲೀಸ್ ಅಧಿಕಾರಿಗಳಿಗೆ 5 ಲಕ್ಷ ರೂ. ದಂಡ – Vishwanews24

ಪೋಕ್ಸೋ ಪ್ರಕರಣದಲ್ಲಿ ನಿರಪರಾಧಿಯನ್ನು ಬಂಧಿಸಿದ ಮಹಿಳಾ ಪೊಲೀಸ್ ಅಧಿಕಾರಿಗಳಿಗೆ 5 ಲಕ್ಷ ರೂ. ದಂಡ

ಮಂಗಳೂರು : ಪೋಕ್ಸೋ ಪ್ರಕರಣದಲ್ಲಿ ನಿರಪರಾಧಿಯನ್ನು ಬಂಧಿಸಿದ ಜೈಲಿನಲ್ಲಿಟ್ಟ ಮಹಿಳಾ ಪೊಲಿಸ್ ಅಧಿಕಾರಿಗಳಿಬ್ಬರಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ತಮ್ಮ ಜೇಬಿನಿಂದಲೇ ನೀಡಬೇಕೆಂದು ಎರಡನೇ ಹೆಚ್ಚುವರಿ ಎಫ್‌ಟಿಎಸ್‌ಸಿ ಪೋಕ್ಸೋ ನ್ಯಾಯಾಲಯ ಆದೇಶ ನೀಡಿದೆ.

ಮಂಗಳೂರು ಮಹಿಳಾ ಪೊಲೀಸ್‌ ಠಾಣಾ ನಿರೀಕ್ಷಕರಾದ ರೇವತಿ ಮತ್ತು ಉಪನಿರೀಕ್ಷಕರಾದ ರೋಸಮ್ಮ ಪಿ ಪಿ ಅವರು ಆರೋಪಿ ನವೀನ್‌ ಸಿಕ್ವೇರ ಅವರಿಗೆ 5,00,000 ರೂ. ಪರಿಹಾರವನ್ನು ನೀಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಇಬ್ಬರು ಪೊಲೀಸ್‌ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರದ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೂ ಆದೇಶಿಸಿದ್ದಾರೆ.

ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಎಂಬ ಆರೋಪಿಯನ್ನು ಬಂಧಿಸುವ ಬದಲು ಪೊಲೀಸರು ನವೀನ್ ಸಿಕ್ವೇರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಆದರೆ ನೊಂದ ಬಾಲಕಿ ತನ್ನ ಫಿರ್ಯಾದಿಯಲ್ಲಿ ಮತ್ತು ನ್ಯಾಯಾಧೀಶರ ಮುಂದೆ ನೀಡಿದ ಹೇಳಿಕೆಯಲ್ಲಿ, ಕೇವಲ ನವೀನ್‌ ಎಂಬ ಆರೋಪಿಯ ಹೆಸರನ್ನು ಉಲ್ಲೇಖೀಸಿದ್ದಳು.ನವೀನ್‌ ಸಿಕ್ವೇರನನ್ನೇ ಆರೋಪಿಯನ್ನಾಗಿಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

ಆರೋಪಿ ಪರ ವಕೀಲರಾದ ರಾಜೇಶ್‌ಕುಮಾರ್‌ ಮತ್ತು ಗಿರೀಶ್‌ ಶೆಟ್ಟಿ ಅವರು ವಾದ ಮಂಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಯು.ರಾಧಾಕೃಷ್ಣ ಅವರು, ನವೀನ್‌ ಸಿಕ್ವೇರ ನಿರಪರಾಧಿ ಎಂದು ಖುಲಾಸೆ ಗೊಳಿಸಿದ್ದಾರೆ. ಅಲ್ಲದೆ ಪೊಲೀಸ್‌ ಅಧಿಕಾರಿಗಳು ನಿಜವಾದ ವ್ಯಕ್ತಿಯನ್ನು ಬಂಧಿಸದೆ, ನವೀನ್‌ ಸಿಕ್ವೇರ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಕ್ಕೆ 5 ಲ.ರೂ. ಪರಿಹಾರ ನೀಡಲು ಆದೇಶಿಸಿದ್ದಾರೆ.

 

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

14 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

15 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

15 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

15 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

15 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

15 hours ago