Judge and gavel in courtroom
ಮಂಗಳೂರು : ಪೋಕ್ಸೋ ಪ್ರಕರಣದಲ್ಲಿ ನಿರಪರಾಧಿಯನ್ನು ಬಂಧಿಸಿದ ಜೈಲಿನಲ್ಲಿಟ್ಟ ಮಹಿಳಾ ಪೊಲಿಸ್ ಅಧಿಕಾರಿಗಳಿಬ್ಬರಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ತಮ್ಮ ಜೇಬಿನಿಂದಲೇ ನೀಡಬೇಕೆಂದು ಎರಡನೇ ಹೆಚ್ಚುವರಿ ಎಫ್ಟಿಎಸ್ಸಿ ಪೋಕ್ಸೋ ನ್ಯಾಯಾಲಯ ಆದೇಶ ನೀಡಿದೆ.
ಮಂಗಳೂರು ಮಹಿಳಾ ಪೊಲೀಸ್ ಠಾಣಾ ನಿರೀಕ್ಷಕರಾದ ರೇವತಿ ಮತ್ತು ಉಪನಿರೀಕ್ಷಕರಾದ ರೋಸಮ್ಮ ಪಿ ಪಿ ಅವರು ಆರೋಪಿ ನವೀನ್ ಸಿಕ್ವೇರ ಅವರಿಗೆ 5,00,000 ರೂ. ಪರಿಹಾರವನ್ನು ನೀಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರದ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೂ ಆದೇಶಿಸಿದ್ದಾರೆ.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಎಂಬ ಆರೋಪಿಯನ್ನು ಬಂಧಿಸುವ ಬದಲು ಪೊಲೀಸರು ನವೀನ್ ಸಿಕ್ವೇರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಆದರೆ ನೊಂದ ಬಾಲಕಿ ತನ್ನ ಫಿರ್ಯಾದಿಯಲ್ಲಿ ಮತ್ತು ನ್ಯಾಯಾಧೀಶರ ಮುಂದೆ ನೀಡಿದ ಹೇಳಿಕೆಯಲ್ಲಿ, ಕೇವಲ ನವೀನ್ ಎಂಬ ಆರೋಪಿಯ ಹೆಸರನ್ನು ಉಲ್ಲೇಖೀಸಿದ್ದಳು.ನವೀನ್ ಸಿಕ್ವೇರನನ್ನೇ ಆರೋಪಿಯನ್ನಾಗಿಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ಆರೋಪಿ ಪರ ವಕೀಲರಾದ ರಾಜೇಶ್ಕುಮಾರ್ ಮತ್ತು ಗಿರೀಶ್ ಶೆಟ್ಟಿ ಅವರು ವಾದ ಮಂಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಯು.ರಾಧಾಕೃಷ್ಣ ಅವರು, ನವೀನ್ ಸಿಕ್ವೇರ ನಿರಪರಾಧಿ ಎಂದು ಖುಲಾಸೆ ಗೊಳಿಸಿದ್ದಾರೆ. ಅಲ್ಲದೆ ಪೊಲೀಸ್ ಅಧಿಕಾರಿಗಳು ನಿಜವಾದ ವ್ಯಕ್ತಿಯನ್ನು ಬಂಧಿಸದೆ, ನವೀನ್ ಸಿಕ್ವೇರ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಕ್ಕೆ 5 ಲ.ರೂ. ಪರಿಹಾರ ನೀಡಲು ಆದೇಶಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…