ಪೋಕ್ಸೋ ಪ್ರಕರಣ : ಅ.10 ರವರೆಗೆ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ವಿಸ್ತರಣೆ :ಕೋರ್ಟ್ ಆದೇಶ – Vishwanews24

Featured, ರಾಜ್ಯ ನ್ಯೂಸ್

ಪೋಕ್ಸೋ ಪ್ರಕರಣ : ಅ.10 ರವರೆಗೆ ಮುರುಘಾಶ್ರೀಗಳ ನ್ಯಾಯಾಂಗ ಬಂಧನ ವಿಸ್ತರಣೆ : ಕೋರ್ಟ್ ಆದೇಶ

ಚಿತ್ರದುರ್ಗ : ಪೋಕ್ಸೋ ಪ್ರಕರಣ ಸಂಬಂಧ ಜೈಲುಪಾಲಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅಕ್ಟೋಬರ್ 10 ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಇಂದು ಮುರುಘಾ ಶ್ರೀಗಳ ನ್ಯಾಯಾಂಗ ಬಂಧನಅಂತ್ಯವಾದ ಹಿನ್ನೆಲೆ ಅವರನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ಇದೀಗ ವಿಚಾರಣೆ ನಡೆಸಿದ ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಈ ಆದೇಶ ಹೊರಡಿಸಿದೆ.

ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮಠದ ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇರೆಗೆ ಜೈಲು ಪಾಲಾಗಿರುವ ಮುರುಘಾ ಶ್ರೀ ಜೈಲಿನಿಂದಲೇ ಚೆಕ್, ಮತ್ತಿತರ ದಾಖಲೆಗಳಿ ಸಹಿ ಹಾಕಲು ಅನುಮತಿ ಕೇಳಿದ್ದಾರೆ. ಮಠದ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ವೇತನ ನೀಡಿವ ಸಲುವಾಗಿ ಚೆಕ್​ಗಳಿಗೆ ಸಹಿ ಹಾಕಲು ಅನುಮತಿ ನೀಡುವಂತೆ ಕೋರ್ಟ್​ಗೆ ಮನವಿ ಮಾಡಿದ್ದರು.ಬಳಿಕ ಚೆಕ್, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಜೈಲಿನಿಂದಲೇ ಚೆಕ್, ದಾಖಲೆಗೆ ಸಹಿ ಹಾಕಲು ಅನುಮತಿ ಕೋರಿ ಮುರುಘಾ ಶರಣ ಪರ ವಕೀಲರು ಚಿತ್ರದುರ್ಗದ ಸೆಷನ್​ ಕೋರ್ಟ್​ಗೆ ಮನವಿ ಮಾಡಿದ್ದರು. ಆದ್ರೆ, ಕೋರ್ಟ್, ಅನುಮತಿ ನಿರಾಕರಿಸಿ ಸೆ.20ರಂದು ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಗ ಮುರುಘಾ ಶರಣರು ಹೈಕೋರ್ಟ್​ ಮೊರೆ ಹೋಗಿದ್ದರು.

ಚಿಕ್ಕಮಗಳೂರು : 10ಕ್ಕೂ ಅಧಿಕ ಪಿ.ಎಫ್.ಐ., ಎಸ್.ಡಿ.ಪಿ.ಐ. ಕಾರ್ಯಕರ್ತರು ಪೊಲೀಸ್ ವಶಕ್ಕೆ – Vishwanews24

Leave a Reply