ಬೆಂಗಳೂರು : ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ದಾಖಲಾಗಿರುವ ದೂರಿನ ಕುರಿತು ತನಿಖೆ ನಡೆಸುವ ಹೊಣೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಇಂದು ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದೆ. ಇದರ ಬೆನ್ನಲ್ಲೆ ಬಿಎಸ್ ಯಡಿಯೂರಪ್ಪ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪ, ತಾವು ಯಾವುದೇ ಕಾನೂನು ಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ದೂರು ನೀಡುವುದೇ ಹವ್ಯಾಸ ಆಗಿದೆ. ಎಫ್ಐಆರ್ ದಾಖಲಾದ ನಂತರ ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ನಾನು ಹಾಜರಾಗಿದ್ದೆ ಎಂದು ಪ್ರಕರಣ ರದ್ದು ಕೋರಿ ಹೈಕೋರ್ಟಿಗೆ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯಲ್ಲಿ ಉಲ್ಲೇಖಸಿಸಿದ್ದಾರೆ.
ಯಡಿಯೂರಪ್ಪನವರ ಬಳಿ ಸಹಾಯ ಕೋರಿ ಹೋಗಿದ್ದಾಗ ತಮ್ಮ ಪುತ್ರಿಯ ಜೊತೆಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಮಾರ್ಚ್ 14ರಂದು ದೂರು ದಾಖಲಿಸಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ನಿವಾಸದಲ್ಲಿ ಈ ಘಟನೆ ನಡೆದಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಳು.
ಯಡಿಯೂರಪ್ಪನವರ ವಿರುದ್ಧ ಈ ಮಹಿಳೆ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಳು. ಅದರ ಮರುದಿನ, ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ, ಸಿಐಡಿಗೆ ವರ್ಗಾಯಿಸಿತ್ತು. ಸಿಐಡಿ ತಂಡದ ವತಿಯಿಂದ ತನಿಖೆಗೊಳಪಟ್ಟಿರುವ ಈ ಪ್ರಕರಣದಲ್ಲಿ ಅಧಿಕಾರಿಗಳು ಸಂತ್ರಸ್ತೆ ಹೇಳಿಕೆಗಳನ್ನು ಈಗಾಗಲೇ ದಾಖಲಿಸಿಕೊಂಡಿದ್ದಾರೆ. ಹಾಗಾಗಿ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ ಕೂಡಲೇ ಯಡಿಯೂರಪ್ಪ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…