ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶಿಸಿದ್ದು ಹೀಗಾಗಿ ಬಂಧನ ಭೀತಿ ಎದುರಾಗಿದೆ.
ವಿಚಾರಣೆಗೆ ಬಿಎಸ್ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ವಾರಂಟ್ ಹೊರಡಿಸಲು ಪೊಲೀಸರು ಜೂ.12 ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಇದೀಗ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ಅತ್ಯಾಚಾರ ಸಂತ್ರಸ್ತ ಅಪ್ರಾಪ್ತ ಬಾಲಕಿ ಮತ್ತು ಆಕೆಯ ತಾಯಿ ಕಾನೂನಾತ್ಮಕ ನೆರವು ಕೇಳಲು ಹೋಗಿದ್ದರು. ಈ ವೇಳೆ ಅಪ್ರಾಪ್ತ ಪುತ್ರಿಯೊಂದಿಗೆ ಬಿಎಸ್‌ವೈ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಕಳೆದ ಮಾರ್ಚ್ ತಿಂಗಳಲ್ಲೇ ಮಹಿಳೆ ದೂರು ನೀಡಿದ್ದರು. ಆದರೆ, ಕಳೆದ ತಿಂಗಳು ಆ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ಸಿಐಡಿ ತನಿಖೆಗೆ ವಹಿಸಲಾಗಿತ್ತು.
ಆದರೆ, ಪ್ರಕರಣ ವಿಚಾರಣೆಗೆ ನೊಟೀಸ್ ಜಾರಿ ಮಾಡಲಾಗಿತ್ತು. ಆದರೆ, ಎರಡು ಬಾರಿ ನೊಟೀಸ್ ನೀಡಿದರೂ ಹಾಜರಾಗದ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಯಡಿಯೂರಪ್ಪ ಬಂಧನಕ್ಕೆ ಅವಕಾಶ ನೀಡಬೇಕು ಎಂದು ಕೋರ್ಟ್ ಮೊರೆ ಹೋಗಿದ್ದರು. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ಬಿ ಎಸ್ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…