Featured

ಪೋಕ್ಸೋ ಪ್ರಕರಣ : ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್​ ; ನಿರೀಕ್ಷಣಾ ಜಾಮೀನು  ಮಂಜೂರು – vishwanews24

ಪೋಕ್ಸೋ ಪ್ರಕರಣ : ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್​ ; ನಿರೀಕ್ಷಣಾ ಜಾಮೀನು  ಮಂಜೂರು

ಧಾರವಾಡ,: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್​ ಸಿಕ್ಕಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಪೀಠ ಇಂದು (ಫೆಬ್ರವರಿ 07) ಆದೇಶ ಹೊರಡಿಸಿದೆ.

ಆದ್ರೆ, ಪ್ರಕರಣ ರದ್ದು ಮಾಡಲು ನಿರಾಕರಿಸಿದೆ. ಇದರಿಂದ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ ಅಷ್ಟೇ. ಆದ್ರೆ ಕಷ್ಟ ತಪ್ಪಿಲ್ಲ. ಯಾಕಂದ್ರೆ ಕೋರ್ಟ್​ ಕೇವಲ ಜಾಮೀನು ನೀಡಿದೆ ಹೊರತು ಪ್ರಕರಣ ರದ್ದು ಮಾಡಿಲ್ಲ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮುಗಿದಿದ್ದು, ಇಂದಿಗೆ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಅದರಂತೆ ಇದೀಗ ಧಾರವಾಡ ಹೈಕೋರ್ಟ್​ ಪೀಠ, ಪ್ರಕರಣ ರದ್ದುಪಡಿಸಲು ನಿರಾಕರಿಸಿದ್ದು, ಕೇವಲ ನಿರೀಕ್ಷಣಾ ಜಾಮೀನು ನೀಡಿದೆ. ಹೀಗಾಗಿ ಯಡಿಯೂರಪ್ಪ ಬಂಧನದಿಂದ ಪಾರಾಗಿದ್ದಾರೆ ಹೊರತೂ ವಿಚಾರಣೆ ಎದುರಿಸಲೇಬೇಕಾಗಿದೆ.

ಇನ್ನು ತಾಂತ್ರಿಕ ಕಾರಣಕ್ಕೆ ಈ ಪ್ರಕರಣವನ್ನು ಹೈಕೋರ್ಟ್​, ಪೋಕ್ಸೋ ಕೋರ್ಟ್​ಗೆ ವಾಪಸ್ ಮರಳಿಸಿದೆ. ಹೀಗಾಗಿ ಬಿಎಸ್ ಯಡಿಯೂರಪ್ಪ ಅವರು ಪೋಕ್ಸೋ ಕೋರ್ಟ್​​ನಲ್ಲಿ ವಿಚಾರಣೆ ಎದುರಿಸಬೇಕಿದೆ.

ಪ್ರಕರಣದ ಹಿನ್ನೆಲೆ
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಬಿಎಸ್​ವೈ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು. ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

13 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

14 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

14 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

14 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

14 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

15 hours ago