ಪೋಕ್ಸೋ ಪ್ರಕರಣ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಯಡಿಯೂರಪ್ಪ – vishwanews24

Featured, ರಾಜ್ಯ ನ್ಯೂಸ್

ಪೋಕ್ಸೋ ಪ್ರಕರಣ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಯಡಿಯೂರಪ್ಪ

ಬೆಂಗಳೂರು: ಮಾಜಿ ಸಿಎಂ ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಬಿ.ಎಸ್ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಬಿಎಸ್‌ವೈ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ, ಟ್ರಯಲ್‌ಗೆ ಅನುಮತಿ ನೀಡಿತ್ತು. ಅದಾದ ಬಳಿಕ 1ನೇ ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿತ್ತು. ಸದ್ಯ ಈ ಸಂಬಂಧ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮಂಗಳೂರು: ಡಿ. 25 ರಿಂದ ಮಂಗಳೂರಿನಿಂದ ನವಿ ಮುಂಬೈಗೆ ವಿಮಾನಸೇವೆ ಆರಂಭ – vishwanews24

ಬೆಂಗಳೂರಿನ ತಮ್ಮ ನಿವಾಸದಲ್ಲಿ 17 ವರ್ಷದ ಬಾಲಕಿ ಮೇಲೆ ಬಿಎಸ್ ಯಡಿಯೂರಪ್ಪ ಅವರು ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಸಹಾಯ ಕೇಳಿ ಬಂದಾಗ ಯಡಿಯೂರಪ್ಪನವರು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾರ್ಚ್ 2024ರಲ್ಲಿ ಬಾಲಕಿಯ ತಾಯಿ ದೂರು ದಾಖಲಿಸಿದ್ದರು.

Leave a Reply