ಬೆಂಗಳೂರು: ಮಾಜಿ ಸಿಎಂ ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಬಿ.ಎಸ್ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಬಿಎಸ್‌ವೈ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ, ಟ್ರಯಲ್‌ಗೆ ಅನುಮತಿ ನೀಡಿತ್ತು. ಅದಾದ ಬಳಿಕ 1ನೇ ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿತ್ತು. ಸದ್ಯ ಈ ಸಂಬಂಧ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ 17 ವರ್ಷದ ಬಾಲಕಿ ಮೇಲೆ ಬಿಎಸ್ ಯಡಿಯೂರಪ್ಪ ಅವರು ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಸಹಾಯ ಕೇಳಿ ಬಂದಾಗ ಯಡಿಯೂರಪ್ಪನವರು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾರ್ಚ್ 2024ರಲ್ಲಿ ಬಾಲಕಿಯ ತಾಯಿ ದೂರು ದಾಖಲಿಸಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…