Featured

ಪೋಷಕರನ್ನು ಅರಿವಳಿಕೆ( Anesthesia) ಚುಚ್ಚುಮದ್ದು ನೀಡಿ ಕೊಲೆ ಮಾಡಿದ ಮಗಳು – vishwanews24

ಸಾಮಾಜಿಕ ಮಾಧ್ಯಮದಲ್ಲಿ ಪರಿಚಿತನಾಗಿದ್ದ ವ್ಯಕ್ತಿಯನ್ನು ಮದುವೆಯಾಗಳು ವಿರೋಧಿಸಿದ ಹಿನ್ನಲೆ..

ಪೋಷಕರನ್ನು ಅರಿವಳಿಕೆ( Anesthesia) ಚುಚ್ಚುಮದ್ದು ನೀಡಿ ಕೊಲೆ ಮಾಡಿದ ಮಗಳು

ಹೈದರಾಬಾದ್: ಸಾಮಾಜಿಕ ಮಾಧ್ಯಮದಲ್ಲಿ ಪರಿಚಿತನಾಗಿದ್ದ ವ್ಯಕ್ತಿಯೊಂದಿಗೆ ವಿವಾಹ ಯೋಜನೆಯನ್ನು ವಿರೋಧಿಸಿದ ಪೋಷಕರನ್ನು ನರ್ಸ್ ಒಬ್ಬಳು ಅರಿವಳಿಕೆ( Anesthesia) ಚುಚ್ಚುಮದ್ದು ನೀಡಿ ಕೊಲೆ ಮಾಡಿ ಜೈಲು ಪಾಲಾಗಿದ್ದಾಳೆ.

ಆರೋಪಿ ಬಿ. ಸುರೇಖಾ ಎಂಬಾಕೆಯಾಗಿದ್ದು, ವೃತ್ತಿಯನ್ನು ದುರುಪಯೋಗಪಡಿಸಿಕೊಂಡು ಹೆಚ್ಚಿನ ಪ್ರಮಾಣದ ನಿದ್ರಾಜನಕ ಇಂಜೆಕ್ಷನ್ ನೀಡಿ ಮೂಲಕ ತನ್ನ ಪೋಷಕರನ್ನು ಹತ್ಯೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಎಸ್ಪಿ ಶ್ರೀನಿವಾಸ್ ರೆಡ್ಡಿ, ಧರೂರ್ ಪೊಲೀಸರು ಒಂದೇ ದಿನದೊಳಗೆ ಜೋಡಿ ಕೊಲೆಯನ್ನು ಭೇದಿಸಿದ್ದಾರೆ ಎಂದು ತಿಳಿಸಿದ್ದಾರೆ. ತನಿಖೆಯಿಂದ ಸುರೇಖಾ ಇಸ್ಟ್ರಾಗ್ರಾಮ್ ನಲ್ಲಿ ಪರಿಚಯವಾದ ವ್ಯಕ್ತಿಯನ್ನು ಪ್ರೀತಿಸಿ ಆತನನ್ನು ಮದುವೆಯಾಗಲು ಬಯಸಿದ್ದಳು. ಆಕೆಯ ಪೋಷಕರು ಆಕ್ಷೇಪಿಸಿದಾಗ, ಆಕೆ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದಳು” ಎಂದು ತಿಳಿಸಿದ್ದಾರೆ.

ಜನವರಿ 24 ರಂದು, ಸುರೇಖಾ ತಾನು ಕೆಲಸ ಮಾಡುತ್ತಿದ್ದ ಆಸ್ಪತ್ರೆಯಿಂದ ಅರಿವಳಿಕೆ ಔಷಧಿಗಳನ್ನು ಕದ್ದು ಮನೆಗೆ ಬಂದಿದ್ದಳು. ಅದೇ ದಿನ ರಾತ್ರಿ, ದೀರ್ಘಕಾಲದ ನೋವಿನಿಂದ ಬಳಲುತ್ತಿದ್ದ ತನ್ನ ತಾಯಿ ಲಕ್ಷ್ಮೀ ಗೆ ನಿದ್ರೆ ಮಾಡಲು ಇಂಜೆಕ್ಷನ್ ನೀಡುವುದಾಗಿ ಹೇಳಿದ್ದಳು. ಮಗಳನ್ನು ನಂಬಿ ಲಕ್ಷ್ಮೀ ಒಪ್ಪಿಕೊಂಡಿದ್ದರು. ಆದರೆ ಹೆಚ್ಚಿನ ಡೋಸೇಜ್ ಮಾರಕವೆಂದು ಸಾಬೀತಾಯಿತು. ನಂತರ, ಅವಳ ತಂದೆ ದಶರಥ್ ಮನೆಗೆ ಹಿಂದಿರುಗಿದಾಗ, ಕೃಷಿ ಕೆಲಸದಿಂದ ದಣಿದಿದ್ದೀರಿ ಎಂದು ಅದೇ ನಿದ್ರಾಜನಕವನ್ನು ಚುಚ್ಚಿದ್ದಾಳೆ. ಇಬ್ಬರೂ ಹಾಯ್ ಡೋಸ್ ನಿಂದಾಗಿ ನಿದ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ.

ಮರುದಿನ ಬೆಳಗ್ಗೆ, ಸುರೇಖಾ ಕಂಗಾಲಾದವರಂತೆ ನಟಿಸಿ ತನ್ನ ಹೆತ್ತವರು ಎಚ್ಚರಗೊಳ್ಳುತ್ತಿಲ್ಲ ಎಂದು ಗೋಳಿಡುತ್ತಾನೆ ರೆಹೊರೆಯವರಿಗೆ ಹೇಳಿದ್ದಾಳೆ. ಆಕೆಯ ಸಹೋದರ ಅಶೋಕ್ ಆಸ್ಪತ್ರೆಗೆ ಸಾಗಿಸಿದ್ದು, ಆದರೆ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ಅನುಮಾನಗೊಂಡ ಅಶೋಕ್ ನೀಡಿದ ದೂರಿನ ಆಧಾರದ ಮೇಲೆ, ಧಾರೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡರು. ಆರಂಭದಲ್ಲಿ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿತ್ತು, ಆದರೆ ಮರಣೋತ್ತರ ಪರೀಕ್ಷೆಯ ವರದಿಗಳು ನಿದ್ರಾಜನಕ ಮಿತಿಮೀರಿದ ಸೇವನೆಯಿಂದ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿವೆ. ಸುರೇಖಾಳನ್ನು ಬಂಧಿಸಲಾಯಿತು, ವಿರುದ್ಧವಾದ ಹೇಳಿಕೆ ನೀಡಿ ಅಂತಿಮವಾಗಿ ತಪ್ಲೊಪ್ಪಿಕೊಂಡಿದ್ದಾಳೆ.

ಹತ್ಯೆಯಾದವರು, ನಕ್ಕಲಿ ದಶರಥ್ (59) ಮತ್ತು ಲಕ್ಷ್ಮೀ (54) ಬಂಟ್ವಾರಂ ಮಂಡಲದ ಯಾಚಾರಂ ಗ್ರಾಮದ ರೈತರು. ಇಬ್ಬರು ಹೆಣ್ಣುಮಕ್ಕಳು ಮತ್ತು ಪುತ್ರ ಅಶೋಕ್ ಓದುತ್ತಿದ್ದ ಮತ್ತು ಕೃಷಿ ಕೆಲಸದಲ್ಲಿ ಸಹಾಯ ಮಾಡುತ್ತಿದ್ದ. ಕಿರಿಯ ಮಗಳು ಸುರೇಖಾ ಸಂಗರೆಡ್ಡಿಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ಸದ್ಯ ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿಡಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago