Featured

ಪೋಷಕರು ಶಾಲೆಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು : ರಶ್ಮಿ ಸಿ. ಭಟ್ -Vishwanews24

ಪೋಷಕರು ಶಾಲೆಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು : ರಶ್ಮಿ ಸಿ. ಭಟ್ -Vishwanews24

ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಿ ಅಥವಾ ಮೊಬೈಲ್ ತೆಗೆಸಿಕೊಟ್ಟು ಸುಮ್ಮನಾದರೆ ಸಾಲದು. ಮಕ್ಕಳ ವರ್ತನೆಯನ್ನು ಗಮನಿಸುತ್ತ ಶಾಲೆಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಆಗ ಮಾತ್ರ ಸಾಧನೆ ಮಾಡಲು ಶಿಕ್ಷಕರು ಮಕ್ಕಳನ್ನು ಪ್ರೇರೇಪಿಸಬಹುದು, ಸಾಧಿಸುವ ಛಲವನ್ನು ಹುಟ್ಟು ಹಾಕಬಹುದು. ಹಾಗಾಗಿ ಪೋಷಕರು ಆಗಾಗ್ಗೆ ಶಾಲೆಗೆ ಭೇಟಿ ನೀಡುವುದು ಸೂಕ್ತ ಎಂದು ಅಜ್ಜರಕಾಡು ವಾರ್ಡ್ ನಗರ ಸಭಾ ಸದಸ್ಯೆ ರಶ್ಮಿ ಸಿ. ಭಟ್ ಅಭಿಪ್ರಾಯ ಪಟ್ಟರು. ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು ಪೋಷಕರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅವರು ಮಾತನಾಡುತ್ತ ಈ ಶಾಲೆಯ ವಿದ್ಯಾರ್ಥಿನಿಯರ ಪೋಷಕರು ಬಹುಪಾಲು ಪ್ರಜ್ಞಾವಂತರಾಗಿದ್ದಾರೆ, ಆದ್ದರಿಂದ ಶಿಕ್ಷಕರ ಪ್ರಯತ್ನ ಸಾರ್ಥಕವಾಗುತ್ತಿದೆ. ಶಾಲೆಗೆ ಪೋಷಕರ ಸಹಕಾರ ಇದೇ ರೀತಿ ಮುಂದುವರಿಯಲಿ ಎಂದು ಆಶಿಸಿದರು.

ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರುದ್ರೇ ಗೌಡ ವಹಿಸಿ ಸಾಧನೆ ಮಾಡಿದ ವಿದ್ಯಾರ್ಥಿನಿಯರು ತಮ್ಮ ನಂತರದ ಬ್ಯಾಚ್ ನ ವಿದ್ಯಾರ್ಥಿನಿಯರಿಗೆ ತಮ್ಮ ಸಾಧನಾ ಪಥವನ್ನು ವಿವರಿಸಿ ಹೇಳಿ ಅವರಿಗೂ ಮಾರ್ಗದರ್ಶನ ಮಾಡಬೇಕೆಂದು ತಿಳಿ ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ತಾರಾ ದೇವಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಅಂಕ ಗಳಿಸಿ ಪ್ರಥಮ ಸ್ಥಾನಿಯಾದ ಕು| ಸಮತಾಳನ್ನು ಹಾಗೂ ಇಪ್ಪತ್ತು ಮಂದಿ ಸಾಧಕ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಸಮತಾ ತನ್ನ ಅನುಭವವನ್ನು ಹಂಚಿಕೊಂಡಳು. ಈ ಶೈಕ್ಷಣಿಕ ವರ್ಷದ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಹೊಸ ಸದಸ್ಯರನ್ನೂ ಕೂಡ ಆಯ್ಕೆ ಮಾಡಲಾಯಿತು. ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಪ್ರಸ್ತಾವನೆ ಯೊಂದಿಗೆ ಸ್ವಾಗತಿಸಿದರು. ಶಿಕ್ಷಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು. ಶೇಖರ್ ಬೋವಿ ವಂದಿಸಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

1 hour ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

1 hour ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

4 hours ago