Featured

ಪೌರತ್ವ ಕಾಯ್ದೆ ಭಾರತವನ್ನು ವಿಭಜನೆ ಮಾಡುತ್ತದೆ, ಇದು ಭಾರತೀಯರಿಗೆ ಹಿತವಲ್ಲ: ರಮಾನಾಥ ರೈ -Vishwanews24

ಬಂಟ್ವಾಳ : ರಾಷ್ಟ್ರೀಯ ಪೌರತ್ವ ಕಾಯ್ದೆ ವಿರುದ್ಧ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬಿ.ಸಿ.ರೋಡಿನಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು. ಪೌರತ್ವ ಕಾಯ್ದೆ ಭಾರತವನ್ನು ವಿಭಜನೆ ಮಾಡುತ್ತದೆ, ಇದು ಭಾರತೀಯರಿಗೆ ಹಿತವಾದುದಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಕಾಂಗ್ರೆಸ್ ನಾಯಕ ಮಾಜಿ ಸಚಿವ ಬಿ.ರಮಾನಾಥ ರೈ, ರಾಷ್ಟ್ರೀಯ ಪೌರತ್ವ ಕಾಯ್ದೆ ದೇಶದ ಸಾಮರಸ್ಯಕ್ಕೆ ಧಕ್ಕೆ ತರಲಾಗಿದೆ ಎಂದರು. ಜಾತ್ಯಾತೀತರನ್ನು ಅವಹೇಳನ ಮಾಡುವ ಕಾರ್ಯ ನೋವು ತರುತ್ತದೆ. ಮನುಷ್ಯ ಪ್ರೀತಿ ಮಾಡುವವರನ್ನು ಅಪಮಾನ ಮಾಡಲಾಗುತ್ತಿದೆ. ಗಾಂಧಿ ಹತ್ಯೆ ಬೆಂಬಲಿಗರಿದ್ದಾರೆ. ನರೇಂದ್ರ ಮೋದಿ ನೀತಿಗಳು ಸರಿ ಇಲ್ಲ. ಶ್ರೀಮಂತರ, ಬಂಡವಾಳಶಾಹಿಗಳ ಪರ ಇದೆ. ಅತ್ಯಾಚಾರ ನಡೆಯುವುದರ ಕುರಿತು ಬಿಜೆಪಿ ತಲೆಕೆಡಿಸಿಕೊಳ್ಳುತ್ತಿಲ್ಲ. ರಾಹುಲ್ ಹೇಳಿಕೆಗೆ ಟೀಕೆ ಮಾಡಲಾಗುತ್ತಿದೆ. ದೇಶದಲ್ಲಿ ಮತೀಯವಾದ ಮುಂದಿಟ್ಟು ಆಡಳಿತ ನಡೆಸುವುದು ಒಳ್ಳೆಯ ಲಕ್ಷಣವಲ್ಲ ಎಂದವರು ಹೇಳಿದರು.

ಕಾರ್ಯಕ್ರಮದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ ಜೈನ್, ಮಂಜುಳಾ ಮಾಧವ ಮಾವೆ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ, ಪುರಸಭಾ ಸದಸ್ಯರಾದ ವಾಸು ಪೂಜಾರಿ, ಮಹಮ್ಮದ್ ನಂದರಬೆಟ್ಟು, ಮಹಮ್ಮದ್ ಶರೀಫ್, ಸಿದ್ದೀಕ್ ಗುಡ್ಡೆಯಂಗಡಿ, ಗಂಗಾಧರ ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಉಪಾಧ್ಯಕ್ಷ ಬೊಂಡಾಲ ಚಿತ್ತರಂಜನ್ ಶೆಟ್ಟಿ, ಪಕ್ಷ ಪ್ರಮುಖರಾದ ಸದಾಶಿವ ಬಂಗೇರ, ಯೂಸುಫ್ ಕರಂದಾಡಿ, ಮಹಮ್ಮದ್ ನಂದಾವರ, ಸಿದ್ಧೀಕ್ ಸರವು, ವೆಂಕಪ್ಪ ಪೂಜಾರಿ, ಪರಮೇಶ್ವರ ಎಂ, ಧನಲಕ್ಷ್ಮೀ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago