ಮಂಗಳೂರು : ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ಪ್ರತಿಭಟನೆ ಮಂಗಳೂರಿನಲ್ಲಿ ತೀವ್ರಗೊಂಡಿದೆ. ಸದ್ಯ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸರ ಮೇಲೆಯೇ ಪ್ರತಿಭಟನಾಕಾರರು ಮನಸೋಇಚ್ಛೆ ಕಲ್ಲುತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಆಶ್ರುವಾಯು ಪ್ರಯೋಗಿಸಿದ್ದಾರೆ.
ಸ್ಟೇಟ್ ಬ್ಯಾಂಕ್ ಬಳಿ ಆರಂಭವಾದ ಪ್ರತಿಭಟನೆ ವೇಳೆ ಹಿಂಸಾಚಾರ ಉಂಟಾಗಿದ್ದು, ಹೋರಾಟಗಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ, ಕೆಲ ಪೊಲೀಸರು ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿ, ಗಾಳಿಯಲ್ಲಿ ಗುಂಡು ಹಾರಿಸಿದರು. ಆದರೆ ಇದಕ್ಕೂ ಪ್ರತಿಭಟನಾಕಾರರು ಜಗ್ಗದೇ ಪೊಲೀಸರೊಂದಿಗೆ ಸಂಘರ್ಷಕ್ಕಿಳಿದಿದ್ದಾರೆ.
ಇನ್ನು ರಾವ್ ಅಂಡ್ ರಾವ್ ಸರ್ಕಲ್ ನಲ್ಲಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಬಳಿ ಬಿಗಿ ಬಂದೋಬಸ್ತ್ ಒದಗಿಸಿದ್ದು, ವಾಹನ ಸಂಚಾರ ನಿಷೇಧಿಸಲಾಗಿದೆ. ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗಿಸಲಾಗಿದ್ದು, ಸದ್ಯ ರಾವ್ ಅಂಡ್ ರಾವ್ ಸರ್ಕಲ್ ನಲ್ಲಿ ಪರಿಸ್ಥಿತಿ ತಾರಕಕ್ಕೇರಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಕೆಲ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ…
ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ನಡುವೆ ಎಸ್ಕೆಎಸ್ಸೆಸ್ಸೆಫ್ ಸಂಘಟನೆಯು ಪ್ರತಿಭಟನೆ ನಡೆಸುವ ಸುಳಿವು ಪೊಲೀಸರಿಗೆ ದೊರಕಿತ್ತು. ಈ ಹಿನ್ನಲೆಯಲ್ಲಿ ಪೊಲೀಸರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಂದೋಬಸ್ತ್ ಕಲ್ಪಿಸಿದ್ದರು. ಆದರೆ ಈ ವೇಳೆಗೆ ಸ್ಟೇಟ್ ಬ್ಯಾಂಕ್ ಬಳಿಯ ಸಿಟಿ ಬಸ್ ನಿಲ್ದಾಣದ ಸಮೀಪ ಗುಂಪು ಜಮಾಯಿಸಿ ಘೋಷಣೆ ಕೂಗತೊಡಗಿದರು. ಈ ವೇಳೆ ಪೊಲೀಸರು ಲಘು ಲಾಠಿಚಾರ್ಜ್ ಮಾಡಿ ಗುಂಪನ್ನು ಚದುರಿಸಿ ಹಲವರನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…