ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುವವರು ದೇಶದ್ರೋಹಿಗಳು : ಶಾಸಕ ಸೋಮಶೇಖರ್ ರೆಡ್ಡಿ -Vishwanews24

Featured, ರಾಜ್ಯ ನ್ಯೂಸ್

ಬಳ್ಳಾರಿ : ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುವವರು ದೇಶದ್ರೋಹಿಗಳು ಎಂದು ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ ಕಾಯ್ದೆ ಒಪ್ಪದವರು ದೇಶದ್ರೋಹಿಗಳು, ಭಾರತವನ್ನು ಪ್ರೀತಿಸುವವರಿಗೆ ನಾನು ಪ್ರಾಣ ಕೊಡುವೆ, ಆದರೆ, ದ್ವೇಷಿಸುವವರನ್ನು ಹತ್ತಿರವೂ ಸೇರಿಸಿಕೊಳ್ಳಲ್ಲ ಎಂದರು.

ಇನ್ನು ಸಿಎಎ ಪರ ನಡೆದ ಜಾಗೃತಿ ಸಮಾವೇಶದ ಭಾಷಣದ ಕುರಿತಂತೆ ನನ್ನ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ನಡೆಯುತ್ತಿದೆ. ನ್ಯಾಯಾಂಗಕ್ಕೆ ಎಲ್ಲರೂ ತಲೆ ಬಾಗಲೇಬೇಕು. ತನಿಖೆಗೆ ಸಹಕರಿಸುತ್ತೇನೆ ಎಂದು ಹೇಳಿದರು.