ಹೊಸದಿಲ್ಲಿ: ಬಹು ಚರ್ಚಿತ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದು, ಇನ್ನು ಕಾಯ್ದೆಯಾಗಿ ಜಾರಿಗೆ ಬರಲಿದೆ.
ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರದ ಮಹತ್ವಾಕಾಂಕ್ಷಿ ಪೌರತ್ವ ತಿದ್ದುಪಡಿ ಯೋಜನೆ ಕಳೆದ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದರೆ, ಬುಧವಾರ ರಾಜ್ಯಸಭೆಯಲ್ಲಿ ಒಪ್ಪಿಗೆ ಪಡೆದಿತ್ತು.
ಸರಕಾರದ ಅಧಿಕೃತ ಗೆಜೆಟ್ ನಲ್ಲಿ ಪ್ರಕಟವಾಗುವ ಮೂಲಕ ಈ ಮಸೂದೆ ಕಾಯಿದೆಯಾಗಿ ಜಾರಿಗೆ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ.
ಈ ಕಾಯ್ದೆ ಪ್ರಕಾರ ಪಾಕಿಸ್ಥಾನ, ಬಾಂಗ್ಲಾದೇಶ, ಅಫ್ಘಾನಿಸ್ಥಾನ ದೇಶಗಳಲ್ಲಿ ಧಾರ್ಮಿಕ ಕಿರುಕುಳ ಅನುಭವಿಸಿ 2014ರ ಡಿಸೆಂಬರ್ 31ರ ಒಳಗೆ ಭಾರತಕ್ಕೆ ಆಶ್ರಯಕ್ಕಾಗಿ ಆಗಮಿಸಿದ ಮುಸ್ಲಿಮೇತರರಿಗೆ (ಹಿಂದೂ, ಸಿಖ್ಖ್, ಬೌಧ್ದರು, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯ) ಭಾರತದ ಪೌರತ್ವ ನೀಡಲಾಗುವುದು.
ನೆರೆಯ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ 2014ರೊಳಗೆ ವಲಸೆ ಬಂದಿರುವ ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನ ಮತ್ತು ಪಾರ್ಸಿ ಮತಸ್ಥರಿಗೆ ಭಾರತದ ಪೌರತ್ವವನ್ನು ನೀಡಲಾಗುತ್ತದೆ.
ಭಾರೀ ಚರ್ಚೆಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಮಸೂದೆ ಬುಧವಾರ ರಾಜ್ಯಸಭೆಯಲ್ಲಿ ಅಂಗೀಕಾರವಾಗಿತ್ತು. ರಾಜ್ಯ ಸಭೆಯಲ್ಲಿ ಮಸೂದೆಯ ಪರವಾಗಿ 125 ಮತ್ತು ವಿರೋಧವಾಗಿ 105 ಮತಗಳು ಬಿದಿದ್ದವು. ಇತ್ತ ಲೋಕಸಭೆಯಲ್ಲಿ ಸೋಮವಾರ ಪೌರತ್ವ ತಿದ್ದುಪಡಿ ಮಸೂದೆ 311 ಮತಗಳಿಂದ ಪಾಸ್ ಆಗಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…