ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು ಸಿದ್ಧವಾಗಿದ್ದ ಪ್ಯಾಸೆಂಜರ್ ರೈಲಿಗೆ ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.
ಸಸಾರಾಮ್–ಪಾಟ್ನಾ ಫಾಸ್ಟ್ ಪ್ಯಾಸೆಂಜರ್ ರೈಲು ಬೆಳಿಗ್ಗೆ 6 ಗಂಟೆಗೆ ಹೊರಡಬೇಕಾಗಿದ್ದು, ಅದಕ್ಕೂ ಕೆಲವೇ ಕ್ಷಣಗಳ ಮೊದಲು ರೈಲು ಬೋಗಿಯಿಂದ ಹೊಗೆ ಕಾಣಿಸಿಕೊಂಡು ಬಳಿಕ ಬೆಂಕಿ ವ್ಯಾಪಿಸಿದೆ ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ರೈಲ್ವೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಇದನ್ನೂ ಓದಿ:
ರೈಲು ಬೋಗಿಯಿಂದ ದಟ್ಟ ಹೊಗೆ ಹೊರಬರುತ್ತಿರುವ ದೃಶ್ಯಗಳು ಸ್ಥಳದಲ್ಲಿ ಆತಂಕ ಸೃಷ್ಟಿಸಿತು. ಪ್ರಾಥಮಿಕ ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಘಟನೆ ವೇಳೆ ಯಾವುದೇ ಪ್ರಯಾಣಿಕರು ಗಾಯಗೊಂಡಿಲ್ಲ ಹಾಗೂ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯ ಕುರಿತು ರೈಲ್ವೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…