ಬೆಂಗಳೂರು, -ಐಟಿ ದಾಳಿ ಪ್ರಕರಣದ ನೋಟೀಸ್‍ಗೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತೀವ್ರ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ. ಉದ್ದೇಶಪೂರ್ವಕವಾಗಿಯೇ ನನಗೆ ಕಿರುಕುಳ ನೀಡಲಾಗುತ್ತಿದೆ. ಇದನ್ನು ಎದುರಿಸುವ ಧೈರ್ಯ ನನಗಿದೆ. ನ್ಯಾಯಾಲಯದಲ್ಲಿರುವುದರಿಂದ ನಾನು ಏನನ್ನೂ ಹೇಳುವುದಿಲ್ಲ. ಇಲ್ಲದಿದ್ದರೆ ನಾನೇನು ಎಂಬುದನ್ನು ತೋರಿಸುತ್ತಿದ್ದೆ. ಐಟಿ ಕೇಸ್‍ನಲ್ಲಿ ನನ್ನನ್ನು ದುರುದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ. ಐಟಿ ದಾಳಿ ಪ್ರಕರಣದಲ್ಲಿ ನನಗೆ ಯಾವುದೇ ಸಮನ್ಸ್ ಬಂದಿಲ್ಲ. ಆದರೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಬಂದಿದೆ. ವಿಚಾರಣೆ ಎದುರಿಸುತ್ತೇವೆ, ದೇಶದ ಕಾನೂನಿಗೆ ಗೌರವ ಕೊಡುತ್ತೇವೆ ಎಂದು ಅವರು ಹೇಳಿದರು.
ಐಟಿ ಪ್ರಕರಣದಲ್ಲಿ ನನಗಷ್ಟೇ ಅಲ್ಲ, ನನ್ನ ಸಂಬಂಧಿಕರಿಗೆ, ಆಪ್ತರಿಗೆ ಕಿರುಕುಳ ನೀಡಲಾಗುತ್ತಿದೆ. ಇದನ್ನು ಯಾರು ಮಾಡಿಸುತ್ತಿದ್ದಾರೆ, ಅವರ ಹಿನ್ನೆಲೆ ಏನೆಂದು ನನಗೆ ಗೊತ್ತು. ಅದನ್ನು ಸದ್ಯದಲ್ಲೇ ಬಹಿರಂಗಪಡಿಸುತ್ತೇನೆ ಎಂದು ಹೇಳಿದರು. ಇದರಿಂದ ಡಿ.ಕೆ.ಶಿವಕುಮಾರ್ ಧೃತಿಗೆಡುವುದಿಲ್ಲ. ಕಾನೂನು ಹೋರಾಟ ನಡೆಸುತ್ತೇನೆ ಎಂದು ಹೇಳಿದರು.
ಏನೋ ಪ್ರಮಾದವಾಗಿದೆ ಎಂದು ನೀವು ಬಿಂಬಿಸುತ್ತೀರ. ನಿಮಗೆ ಹೇಗೆ ಸಂತೋಷವಾಗುತ್ತದೋ ಹಾಗೆ ಮಾಡಿ. ಅವರಿಗೆ ಹೇಗೆ ಸಂತೋಷವಾಗುತ್ತದೆಯೋ ಹಾಗೆ ಮಾಡಲಿ. ಕೊನೆಗೆ ದೇಶದ ಕಾನೂನು ಅಂತ ಒಂದಿದೆ. ಅದರ ಮೇಲೆ ನನಗೆ ನಂಬಿಕೆ ಇದೆ ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…