ರಾಜ್ಯ ನ್ಯೂಸ್

“ಪ್ರಕರಣ ಕೋರ್ಟ್’ನಲ್ಲಿದೆ, ಇಲ್ಲದಿದ್ರೆ ನಾನೇನು ಎಂಬುದನ್ನು ತೋರಿಸುತ್ತಿದ್ದೆ” : ಡಿಕೆಶಿ ಗರಂ

ಬೆಂಗಳೂರು, -ಐಟಿ ದಾಳಿ ಪ್ರಕರಣದ ನೋಟೀಸ್‍ಗೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತೀವ್ರ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ. ಉದ್ದೇಶಪೂರ್ವಕವಾಗಿಯೇ ನನಗೆ ಕಿರುಕುಳ ನೀಡಲಾಗುತ್ತಿದೆ. ಇದನ್ನು ಎದುರಿಸುವ ಧೈರ್ಯ ನನಗಿದೆ. ನ್ಯಾಯಾಲಯದಲ್ಲಿರುವುದರಿಂದ ನಾನು ಏನನ್ನೂ ಹೇಳುವುದಿಲ್ಲ. ಇಲ್ಲದಿದ್ದರೆ ನಾನೇನು ಎಂಬುದನ್ನು ತೋರಿಸುತ್ತಿದ್ದೆ. ಐಟಿ ಕೇಸ್‍ನಲ್ಲಿ ನನ್ನನ್ನು ದುರುದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ. ಐಟಿ ದಾಳಿ ಪ್ರಕರಣದಲ್ಲಿ ನನಗೆ ಯಾವುದೇ ಸಮನ್ಸ್ ಬಂದಿಲ್ಲ. ಆದರೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಬಂದಿದೆ. ವಿಚಾರಣೆ ಎದುರಿಸುತ್ತೇವೆ, ದೇಶದ ಕಾನೂನಿಗೆ ಗೌರವ ಕೊಡುತ್ತೇವೆ ಎಂದು ಅವರು ಹೇಳಿದರು.

ಐಟಿ ಪ್ರಕರಣದಲ್ಲಿ ನನಗಷ್ಟೇ ಅಲ್ಲ, ನನ್ನ ಸಂಬಂಧಿಕರಿಗೆ, ಆಪ್ತರಿಗೆ ಕಿರುಕುಳ ನೀಡಲಾಗುತ್ತಿದೆ. ಇದನ್ನು ಯಾರು ಮಾಡಿಸುತ್ತಿದ್ದಾರೆ, ಅವರ ಹಿನ್ನೆಲೆ ಏನೆಂದು ನನಗೆ ಗೊತ್ತು. ಅದನ್ನು ಸದ್ಯದಲ್ಲೇ ಬಹಿರಂಗಪಡಿಸುತ್ತೇನೆ ಎಂದು ಹೇಳಿದರು. ಇದರಿಂದ ಡಿ.ಕೆ.ಶಿವಕುಮಾರ್ ಧೃತಿಗೆಡುವುದಿಲ್ಲ. ಕಾನೂನು ಹೋರಾಟ ನಡೆಸುತ್ತೇನೆ ಎಂದು ಹೇಳಿದರು.

ಏನೋ ಪ್ರಮಾದವಾಗಿದೆ ಎಂದು ನೀವು ಬಿಂಬಿಸುತ್ತೀರ. ನಿಮಗೆ ಹೇಗೆ ಸಂತೋಷವಾಗುತ್ತದೋ ಹಾಗೆ ಮಾಡಿ. ಅವರಿಗೆ ಹೇಗೆ ಸಂತೋಷವಾಗುತ್ತದೆಯೋ ಹಾಗೆ ಮಾಡಲಿ. ಕೊನೆಗೆ ದೇಶದ ಕಾನೂನು ಅಂತ ಒಂದಿದೆ. ಅದರ ಮೇಲೆ ನನಗೆ ನಂಬಿಕೆ ಇದೆ ಎಂದು ಹೇಳಿದರು.

Vishwa News 24

Recent Posts

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

2 hours ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

2 hours ago