ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ದಾಖಲಾಗಿರುವ ಪೋಕ್ಸೋ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ. ಪ್ರಕರಣ ದಾಖಲಾದ ತಕ್ಷಣ ದೋಷಿ, ನಿರ್ದೋಷಿ ಎಂದು ಹೇಳುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ. ಸರಿಯಾಗಿ ತನಿಖೆಯಾಗಬೇಕು. ವಿನಾಕಾರಣ ಯಾರನ್ನೂ ತೇಜೋವಧೆ ಮಾಡುವುದು ಸರಿಯಲ್ಲ ಎಂದರು.
ರಾಜ್ಯದಲ್ಲಿ ನಾವು 20 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಇದೀಗ ಸಿಎಎ ತೆಗೆದುಕೊಂಡು ಬಂದಿದ್ದಾರೆ. ಕಳೆದ 10 ವರ್ಷದಲ್ಲಿ ಇವರ ಅಭಿವೃದ್ಧಿ ಶೂನ್ಯ. ಹೀಗಾಗಿಯೇ ಚುನಾವಣೆ ಸಂದರ್ಭದಲ್ಲಿ ಇಂತಹ ವಿಷಯಗಳನ್ನು ತಂದು ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಕೆಲಸ ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಮೋದಿ ಅವರು ಪ್ರಧಾನಿ ಆಗುವರೆಗೂ ದೇಶ ಇರಲಿಲ್ಲವೋ ಅಥವಾ ದೇಶದಲ್ಲಿ ಅಭಿವೃದ್ಧಿ ಆಗಿರಲಿಲ್ಲವೋ? ಇದೀಗ ಸ್ವರ್ಗ ಆಗಿದೆಯಾ? ಸುಮ್ಮನೆ ಜನರಿಗೆ ಮಂಕು ಬೂದಿ ಎರಚಿದ್ದಾರೆ. ಇದೀಗ ಬಹುತೇಕರಿಗೆ ಇವರ ನಿಜವಾದ ಬಣ್ಣ ಗೊತ್ತಾಗಿದೆ. ನಾವು ಹೇಳಿದಂತೆ ಮಾಡಿದ್ದೇವೆ. ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ಬಿಜೆಪಿ ಸಂಸದರು ನಮ್ಮ ಪಕ್ಷದ ಅಧ್ಯಕ್ಷರ ಜೊತೆಗೆ ಸಂಪರ್ಕದಲ್ಲಿರಬಹುದು. ಈ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…