Featured

ಪ್ರಕಾಶಭಿನಂದನ ಕಾರ್ಯಕ್ರಮಕ್ಕೆ ಸಜ್ಜಾಗಿದೆ ವೇದಿಕೆ.

ಪ್ರಕಾಶಭಿನಂದನ ಕಾರ್ಯಕ್ರಮಕ್ಕೆ ಸಜ್ಜಾಗಿದೆ ವೇದಿಕೆ.

ಮಂಗಳೂರು: ಎಂಆರ್‌ಜಿ ಗ್ರೂಪ್‌ನ ಅಧ್ಯಕ್ಷ ಕೊರಂಗ್ರಪಾಡಿ ಪ್ರಕಾಶ್‌ ಶೆಟ್ಟಿ ಅವರಿಗೆ 60 ವರ್ಷ ತುಂಬಿದ ಹಿನ್ನಲೆಯಲ್ಲಿ ಡಿ.25ರಂದು ಬಂಗ್ರಕೂಳೂರಿನಲ್ಲಿರುವ ಗೋಲ್ಡ್‌ಫಿಂಚ್‌ ಮೈದಾನದಲ್ಲಿ ಆಯೋಜಿಸಲಾಗಿರುವ “ಪ್ರಕಾಶಭಿನಂದನ-60ರ ಸಂಭ್ರಮ”ವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಉದ್ಘಾಟಿಸಲಿದ್ದು , ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಸಚಿವರಾದ ಸಿ.ಟಿ.ರವಿ, ಕೋಟ ಶ್ರೀನಿವಾಸ ಪೂಜಾರಿ, ಸಂಸದರಾದ ಶೋಭಾ ಕರಂದ್ಲಾಜೆ, ಸುಮಲತಾ ಅಂಬರೀಷ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಿಟ್ಟೆ ವಿವಿ ಕುಲಾಧಿಪತಿ ಎನ್‌ ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು. ಕನ್ನಡ ಸಿನಿಮಾ ರಂಗದ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಿಸಲಿದ್ದು ಅರ್ಜುನ್‌ ಜನ್ಯ ಹಾಗೂ ವಿಜಯ ಪ್ರಕಾಶ್‌ ಅವರಿಂದ ರಸಸಂಜೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಅನುಶ್ರೀ, ರೂಪೇಶ್‌ ಶೆಟ್ಟಿ, ನಿತೇಶ್‌ ಶೆಟ್ಟಿ ಎಕ್ಕಾರು ನಿರೂಪಿಸಲಿದ್ದಾರೆ.

 

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago