ಉಡುಪಿ: ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಪುವಿಗೆ ಆಗಮಿಸಿದ್ದಾರೆ. 5 ದಿನಗಳ ಕಾಲ ಅವರು ಆಯುರ್ವೇದ ಚಿಕಿತ್ಸೆ ಪಡೆಯಲು ಅವರು ಭಾನುವಾರ ರಾತ್ರಿ ಆಗಮಿಸಿದರು.
ನಗರದ ಕಾಪುವಿನಲ್ಲಿರುವ ಸಾಯಿರಾಧಾ ಹೆರಿಟೇಜ್ ರೆಸಾರ್ಟ್ ನಲ್ಲಿ ಸಿಎಂಗೆ ಪ್ರಕೃತಿ ಚಿಕಿತ್ಸೆ ನೀಡಲಾಗುತ್ತಿದೆ. ಇವರ ಜೊತೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಕೂಡ ಒಂದು ವಾರದ ಕೋರ್ಸ್ ಕೊಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಮಾಜಿ ಪ್ರಧಾನಿ ಉಡುಪಿಗೆ ಆಗಮಿಸಿದ್ದಾರೆ.
ಚಿಕಿತ್ಸೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ಐದು ದಿನಗಳ ಕಾಲ ಹೆಲ್ತ್ ರಿಸಾರ್ಟ್‍ನಲ್ಲೇ ತಂಗಲಿದ್ದು, ಈ ಐದು ದಿನವೂ ಮಾಧ್ಯಮಗಳಿಂದ ದೂರವಿರಲು ಸಿಎಂ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ರೆಸಾರ್ಟ್ ಆಸು-ಪಾಸು ಮಾಧ್ಯಮಗಳಿಗೆ ಚಿತ್ರೀಕರಣಕ್ಕೆ ನಿರ್ಬಂಧ ಹೇರಲಾಗಿದೆ. ರೆಸಾರ್ಟ್ ಸಮೀಪ ಮಾಧ್ಯಮದವರನ್ನು ಬಿಡದಂತೆ ಸಿಎಂ ಅವರು ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಆದರೆ, ಶ್ರೀಲಂಕಾದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಜೆಡಿಎಸ್ ನಾಯಕರು ಮೃತಪಟ್ಟ ಹಿನ್ನಲೆಯಲ್ಲಿ ಚಿಕಿತ್ಸೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ ಆಗಿದ್ದರು. ಈಗ ಪುನಃ ಚಿಕಿತ್ಸೆ ಮುಂದುವರೆಸಲು ಕಾಪುವಿಗೆ ಆಗಮಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…