Featured

ಉಡುಪಿ :ಪ್ರಗತಿಯಲ್ಲಿರುವ ಮನೆಗಳು, ಕಾಮಗಾರಿ ಪೂರ್ಣಗೊಳ್ಳುವ ಮೊದಲು ಮಳೆ ನೀರು ಕೊಯ್ಲು ಯೋಜನೆಯನ್ನು ಕೈಗೊಳ್ಳಬೇಕು : ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ -Vishwanews24

ಉಡುಪಿ, : ಜಿಲ್ಲೆಯಲ್ಲಿ ಈಗಾಗಲೇ ನಿರ್ಮಾಣ ಹಂತದಲ್ಲಿರುವ ಮನೆಗಳು, ಕಾಮಗಾರಿ ಪೂರ್ಣಗೊಳ್ಳುವ ಮೊದಲು ಮಳೆ ನೀರು ಕೊಯ್ಲು ಯೋಜನೆ ಕಡ್ಡಾಯವಾಗಿ ಕೈಗೊಳ್ಳಬೇಕು. ಹೊಸದಾಗಿ ನಿರ್ಮಾಣಗೊಳ್ಳಲಿರುವ ಮನೆಗಳ ಮೂಲ ಪ್ಲಾನಿಂಗ್‌ನಲ್ಲಿಯೇ ಮಳೆ ಕೊಯ್ಲು ಯೋಜನೆ ಇರಬೇಕು. ಇಲ್ಲದಿದ್ದರೆ ಅಂತಹ ಮನೆ ನಿರ್ಮಾಣಕ್ಕೆ ಲೈಸೆನ್ಸ್‌ ನೀಡದಂತೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆ, ಗ್ರಾಪಂಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಸೂಚಿಸಿದ್ದಾರೆ.

ಭಾರತ ಸರ್ಕಾರವು ಜಲಭದ್ರತೆಗಾಗಿ “ಜಲ ಶಕ್ತಿ ಅಭಿಯಾನ” ಎಂಬ ಕಾರ್ಯಕ್ರಮವನ್ನು ರಾಜ್ಯ ಸರಕಾರಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದು, ಉಡುಪಿ ಜಿಲ್ಲೆಯಲ್ಲಿ ಜಲ ಸಂರಕ್ಷಣೆ ಆಂದೋಲನವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಬುಧವಾರ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.

ಈಗಾಗಲೇ ಪ್ರಗತಿಯಲ್ಲಿರುವ ಮನೆಗಳು, ಕಾಮಗಾರಿ ಪೂರ್ಣಗೊಳ್ಳುವ ಮೊದಲು ಮಳೆ ನೀರು ಕೊಯ್ಲು ಯೋಜನೆಯನ್ನು ಕೈಗೊಳ್ಳಬೇಕು. ಹೊಸದಾಗಿ ನಿರ್ಮಾಣ ಗೊಳ್ಳಲಿರುವ ಮನೆಗಳ ಮೂಲ ಪ್ಲಾನ್‍ನಲ್ಲಿಯೇ ಮಳೆ ಕೊಯ್ಲು ಯೋಜನೆ ಇರಬೇಕು.

ಇಲ್ಲದಿದ್ದರೆ ಅಂತಹ ಮನೆ ನಿರ್ಮಾಣಕ್ಕೆ ಲೈಸೆನ್ಸ್ ನೀಡದಂತೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ್‍ಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ತೆರೆದ ಬಾವಿ, ಬೋರ್‍ವೆಲ್ ಅಥವಾ ಪ್ರತ್ಯೇಕ ಇಂಗು ಗುಂಡಿ ಕೊರೆದು ಮಳೆ ನೀರು ಶೇಖರಣೆಗೆ ಯೋಜನೆ ಹಾಕಿಕೊಳ್ಳಬೇಕು. ಇತ್ತೀಚಿನ ಬೇಸಿಗೆಯಲ್ಲಿ ಜಿಲ್ಲೆಯ ಹಲವೆಡೆ ಪ್ರದೇಶಗಳಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಮಳೆ ಕೊಯ್ಲು ಕಡ್ಡಾಯಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ ಅನುಮತಿ ನೀಡಿದ ಹಾಗೂ ಪೂರ್ಣಗೊಂಡ ಮನೆಗಳ ಸಂಖ್ಯೆ ಹಾಗೂ ಅವುಗಳಲ್ಲಿ ಮಳೆ ಕೊಯ್ಲು ಅಳವಡಿಸಿರುವ ಬಗ್ಗೆ ನಿಗಾ ವಹಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಗ್ರ ಮಾಹಿತಿ ಇಟ್ಟುಕೊಳ್ಳಲಾಗುವುದು. ಈ ಮಾಹಿತಿ ಗಳನ್ನು ಸಾರ್ವಜನಿಕವಾಗಿಯೇ ಪ್ರಕಟಿಸಲಾಗುವುದು. ಜಿಲ್ಲೆಯಲ್ಲಿ ಸಾಂಪ್ರದಾಯಿಕ ನೀರಿನ ಮೂಲಗಳನ್ನು ಸಂರಕ್ಷಿಸಿ, ಅವುಗಳಲ್ಲಿ ನೀರಿನ ಸಂಗ್ರಹ ಹೆಚ್ಚಿಸಲು ಸಂಬಂಧಪಟ್ಟ ಇಲಾಖೆಗಳು ಕೂಡಲೇ ಕಾರ್ಯೋನ್ಮುಖರಾಗುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಪ್ರಮುಖ ಕೆರೆ, ಮರಗಳನ್ನು ಗುರುತಿಸಿ ಅವುಗಳನ್ನು ಅಭಿವೃದ್ಧಿ ಗೊಳಿಸಲು ಅವರು ತಿಳಿಸಿದರು. ಉಡುಪಿ ನಗರ ಸಭೆ ವ್ಯಾಪ್ತಿಯ 5 ವಾರ್ಡ್‍ಗಳನ್ನು ಆಯ್ಕೆ ಮಾಡಿ ಅಲ್ಲಿನ ಪ್ರತೀ ಮನೆಗೆ 5 ಗಿಡಗಳನ್ನು ನೀಡಿ ಬೆಳೆಸಲು ಪ್ರೋತ್ಸಾಯಿಸಬೇಕು. ಇದಕ್ಕಾಗಿ ಪ್ರತೀ ವಾರ್ಡ್‍ಗೆ ನಗರ ಸಭೆಯ ಒಬ್ಬರು ಇಂಜಿನಿಯರ್‍ನ್ನು ನೋಡಲ್ ಆಗಿ ನೇಮಕ ಮಾಡಬೇಕು. ಜುಲೈ ಅಂತ್ಯದೊಳಗೆ 20 ಸಾವಿರ ಗಿಡಗಳನ್ನು ಈ 5 ವಾರ್ಡ್‍ಗಳಲ್ಲಿ ನೆಟ್ಟು ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ನಗರಸಭೆ ಆಯುಕ್ತರಿಗೆ ಸೂಚನೆ ನೀಡಿದರು.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಪ್ರಮುಖ ಕೆರೆ, ಮರಗಳನ್ನು ಗುರುತಿಸಿ ಅವುಗಳನ್ನು ಅಭಿವೃದ್ಧಿಗೊಳಿಸಲು ಮುಂದಾಗಬೇಕು ಎಂದು ಹೇಳಿದ್ದಾರೆ.

 

Vishwa News 24

Recent Posts

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

49 seconds ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

9 minutes ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

18 minutes ago

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ – vishwanews24

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…

26 minutes ago

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago