ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವಿನೊಂದಿಗೆ ಕೇಂದ್ರದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೇರುತ್ತಿರುವ ಪ್ರಧಾನಿ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇಂದು ರಾಷ್ಟ್ರಪತಿ ಭವನದಲ್ಲಿ ಸಂಜೆ 7 ಗಂಟೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ನೂತನ ಸಂಪುಟದ ಸಚಿವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧಿಕಾರದ ಗೌಪ್ಯತೆ ಬೋಧಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆಯಲ್ಲಿ ಹೇಳಲಾಗಿದೆ.
ರಾಷ್ಟ್ರಪತಿ ಭವನ ಮುಂಭಾಗ ಪದಗ್ರಹಣಕ್ಕೆ ಸಕಲ ಸಿದ್ಧತೆ ನಡೆದಿದೆ. ನರೇಂದ್ರ ಮೋದಿ ಅವರೊಂದಿಗೆ ಎನ್ಡಿಎಯ 65ಕ್ಕೂ ಹೆಚ್ಚು ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರತಿಜ್ಞಾವಿಧಿಗೂ ಮೊದಲು ನರೇಂದ್ರ ಮೋದಿ ರಾಜ್ ಘಾಟ್ ನಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಸಮಾಧಿ ಬಳಿ ತೆರಳಿ ಪುಷ್ಪ ನಮನ ಸಲ್ಲಿಸಿದರು.
ಈ ಸಮಾರಂಭಕ್ಕೆ ದೇಶ, ವಿದೇಶದ ಗಣ್ಯರು ಸಾಕ್ಷಿಯಾಗಲಿದ್ದಾರೆ. ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅಫ್ಘಾನಿಸ್ತಾನ ಅಧ್ಯಕ್ಷ ಅಬ್ದುಲ್ ಹಮೀದ್, ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ನೇಪಾಳ ಪ್ರಧಾನಿ ಕೆ.ಪಿ ಶರ್ಮಾ ಒಲಿ, ಮ್ಯಾನ್ಮಾರ್ ಅಧ್ಯಕ್ಷ ಯು ವಿನ್ ಮಿಂಟ್, ಭೂತಾನ್ ಪ್ರಧಾನಿ ಲೋಟೆ ಶೆರಿಂಗ್, ಥಾಯ್ಲೆಂಡ್ ವಿಶೇಷ ರಾಯಭಾರಿ ಗ್ರಿಸಾಡಾ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್, ಕಿರ್ಗಿಸ್ತಾನ ಅಧ್ಯಕ್ಷ ಸೂರನ್ ಬೇ ಜೀನ್ ಬೆಕಾವೊ ಮತ್ತಿತರು ಪಾಲ್ಗೊಳ್ಳಲಿದ್ದಾರೆ.
ಅಲ್ಲದೆ, ಕರ್ನಾಟಕ ಸಿಎಂ ಕುಮಾರಸ್ವಾಮಿ, ಆಂಧ್ರ ನಿಯೋಜಿತ ಸಿಎಂ ಜಗಮೋಹನ್ ರೆಡ್ಡಿ, ತೆಲಂಗಾಣ ಸಿಎಂ ಚಂದ್ರಶೇಖರ ರಾವ್, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ತಮಿಳು ಸೂಪರ್ ಸ್ಟಾರ್ ಕಮ್ ರಾಜಕಾರಣಿಗಳಾದ ರಜನೀಕಾಂತ್, ಕಮಲ್ ಹಾಸನ್ ಮುಂತಾದ ಗಣ್ಯರೂ ಭಾಗಿಯಾಗಲಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…