Featured

ಪ್ರಚೋದನಕಾರಿ ಭಾಷಣ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಬೇಡ  : ಕೋರ್ಟ್ ಆದೇಶ  – vishwanews24

ಪ್ರಚೋದನಕಾರಿ ಭಾಷಣ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಬೇಡ  : ಕೋರ್ಟ್ ಆದೇಶ

ಮಂಗಳೂರು: ಪ್ರಚೋದನಕಾರಿ ಭಾಷಣ ಆರೋಪದಡಿ ದಾಖಲಾಗಿದ್ದ ಪ್ರಕರಣದಿಂದ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ಪಡೆದಿದ್ದ ಹಿಂದೂ ನಾಯಕ, ಆರ್‌ಎಸ್‌ಎಸ್ ಮುಂದಾಳು ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಬಲವಂತದ ಕ್ರಮ ಕೈಗೊಳ್ಳದಂತೆ ಪುತ್ತೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸಹಿತ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.

ಪ್ರಚೋದನಕಾರಿ ಭಾಷಣ ಆರೋಪದಡಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಎಫ್‌ಐಆರ್ ದಾಖಲಾಗಿತ್ತು. ಅಕ್ಟೋಬರ್ 20 ರಂದು ಪುತ್ತೂರು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿದ್ದರು. ಭಾಷಣದ ವೇಳೆ ಧಾರ್ಮಿಕ ಬಾವನೆಗಳ ಪ್ರಚೋಜನೆ, ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಈಶ್ವರಿ ಪದ್ಮುಂಜ ಎಂಬವರು ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಪುತ್ತೂರು ಗ್ರಾಮಂತರ ಪೊಲೀಸರು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು. ಹೀಗಾಗಿ ಕಲ್ಲಡ್ಕ ಪ್ರಭಾಕರ ಭಟ್ ಪೊಲೀಸರ ಎಫ್‌ಐಆರ್ ವಿರುದ್ದ ಕೋರ್ಟ್ ಮೆಟ್ಟಿಲೇರಿದ್ದರು. ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ದ್ವೇಷಪೂರಿತ ಎಂದು ವಾದಿಸಿದ್ದರು. ಇದೀಗ ಕೋರ್ಟ್ ಪೊಲೀಸರಿಗೆ ಮಹತ್ವದ ಸೂಚನೆ ನೀಡಿದೆ. ಮುಂದಿನ ವಿಚಾರಣೆ ವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚಿಸಿದೆ.ಮುಂದಿನ ವಿಚಾರಣೆಯನ್ನು ಅಕ್ಟೋಬರ್ 29ಕ್ಕೆ ಮುಂದೂಡಿದೆ. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್, ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

10 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago