ಮಂಗಳೂರು: ಪ್ರಚೋದನಕಾರಿ ಭಾಷಣ ಆರೋಪದಡಿ ದಾಖಲಾಗಿದ್ದ ಪ್ರಕರಣದಿಂದ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ಪಡೆದಿದ್ದ ಹಿಂದೂ ನಾಯಕ, ಆರ್‌ಎಸ್‌ಎಸ್ ಮುಂದಾಳು ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಬಲವಂತದ ಕ್ರಮ ಕೈಗೊಳ್ಳದಂತೆ ಪುತ್ತೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸಹಿತ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.
ಪ್ರಚೋದನಕಾರಿ ಭಾಷಣ ಆರೋಪದಡಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಎಫ್‌ಐಆರ್ ದಾಖಲಾಗಿತ್ತು. ಅಕ್ಟೋಬರ್ 20 ರಂದು ಪುತ್ತೂರು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿದ್ದರು. ಭಾಷಣದ ವೇಳೆ ಧಾರ್ಮಿಕ ಬಾವನೆಗಳ ಪ್ರಚೋಜನೆ, ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಈಶ್ವರಿ ಪದ್ಮುಂಜ ಎಂಬವರು ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಪುತ್ತೂರು ಗ್ರಾಮಂತರ ಪೊಲೀಸರು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು. ಹೀಗಾಗಿ ಕಲ್ಲಡ್ಕ ಪ್ರಭಾಕರ ಭಟ್ ಪೊಲೀಸರ ಎಫ್‌ಐಆರ್ ವಿರುದ್ದ ಕೋರ್ಟ್ ಮೆಟ್ಟಿಲೇರಿದ್ದರು. ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ದ್ವೇಷಪೂರಿತ ಎಂದು ವಾದಿಸಿದ್ದರು. ಇದೀಗ ಕೋರ್ಟ್ ಪೊಲೀಸರಿಗೆ ಮಹತ್ವದ ಸೂಚನೆ ನೀಡಿದೆ. ಮುಂದಿನ ವಿಚಾರಣೆ ವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚಿಸಿದೆ.ಮುಂದಿನ ವಿಚಾರಣೆಯನ್ನು ಅಕ್ಟೋಬರ್ 29ಕ್ಕೆ ಮುಂದೂಡಿದೆ. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್, ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…