ಮೈಸೂರು :ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರ. ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ. ಬಿಜೆಪಿ ಮಾತ್ರ ಏಕೆ ವಿರೋಧಿಸುತ್ತಾರೆ? ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.
ಶಾಂತಿ ಹಾಗೂ ಭಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದೆ ಎಂದರು. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಎಂದು ಅವರು ಹೇಳಿದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…