Featured

ಪ್ರಚೋದನಾಕಾರಿ ಹೇಳಿಕೆ ಆರೋಪ : ಶರಣ್ ಪಂಪ್ವೆಲ್ ವಿರುದ್ದ ಪ್ರಕರಣ ದಾಖಲು – vishwanews24

ಪ್ರಚೋದನಾಕಾರಿ ಹೇಳಿಕೆ ಆರೋಪ : ಶರಣ್ ಪಂಪ್ವೆಲ್ ವಿರುದ್ದ ಪ್ರಕರಣ ದಾಖಲು

ಉಡುಪಿ: ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಪತ್ರಿಕಾಗೋಷ್ಠಿ ನಡೆಸಿದ ಹಿಂದೂ ಸಂಘಟನೆ ಮುಖಂಡ ಶರಣ್ ಪಂಪ್ ವೆಲ್ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜುಲೈ 3 ರಂದು ಭರತೇಶ್ ಕಂಕಣವಾಡಿ, ಪೊಲೀಸ್ ಉಪನಿರೀಕ್ಷಕರು (ಕಾ ಮತ್ತು ಸು), ಉಡುಪಿ ನಗರ ಪೊಲೀಸ್ ಠಾಣೆ ಇವರು ಸೋಷಿಯಲ್ ಮೀಡಿಯಾವನ್ನು ವೀಕ್ಷಿಸುತ್ತಿದ್ದಾಗ ವಾಟ್ಸಾಪ್ ಮುಖಾಂತರ ವಿಡಿಯೋ ಬಂದಿದ್ದು, ವಿಡಿಯೋದಲ್ಲಿ ಶರಣ್ ಪಂಪವೆಲ್ ಸುದ್ದಿ ಚಾನೆಲ್ ನಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಯನ್ನು ಉದ್ದೇಶಿಸಿ ಸಾರ್ವಜನಿಕವಾಗಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿರುತ್ತಾರೆ.

ಆರೋಪಿ ಶರಣ್ ಪಂಪ್ ವೆಲ್ ನೀಡಿದ ವಿಡಿಯೋ ವಿವಿಧ ವಾಟ್ಸಪ್ ಗ್ರೂಪ್ ಗಳಿಗೆ ಹರಿಬಿಟ್ಟಿದ್ದು, ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಪತ್ರಿಕಾ ಗೋಷ್ಠಿಯಲ್ಲಿ ಪ್ರಕರಣದ ತನಿಖೆಯು ಪೂರ್ಣಗೊಳ್ಳುವ ಮೊದಲೇ ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿರುತ್ತಾರೆ

ಶರಣ್ ಪಂಪ್ ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿರುತ್ತದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago