ಬೆಂಗಳೂರು: ಪ್ರಜ್ವಲ್ ರೇವಣ್ಣ ಬರುವ ಮಾಹಿತಿ ಇದೆ. ಅವರೇ ಬರುವುದಾಗಿ ಹೇಳಿದ್ದು, ಬಂದರೆ ನಮ್ಮ ಎಸ್‍ಐಟಿ ಅಧಿಕಾರಿಗಳು ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆಯುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‍ರನ್ನು ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆಯಲು ಈಗಾಗಲೇ ವಾರೆಂಟ್ ಜಾರಿಯಾಗಿದೆ. ಬಳಿಕ ಕಾನೂನು ಪ್ರಕಾರ ಅವರನ್ನು ವಿಚಾರಣೆ ನಡೆಸಲಾಗುತ್ತದೆ. ಪ್ರಜ್ವಲ್ ವಾಪಸ್ ಆಗುವ ಹಿನ್ನೆಲೆಯಲ್ಲಿ ಎಸ್‍ಐಟಿ ಎಲ್ಲಾ ತಯಾರಿ ಮಾಡಿಕೊಂಡಿದೆ. ಬೇರೆ ದೇಶಕ್ಕೆ ಹೋಗಿ ನಾವು ಅರೆಸ್ಟ್ ಮಾಡುವಂತಿಲ್ಲ. ಆ ರೀತಿ ಮಾಡಲು ಬರಲ್ಲ. ಕೇಂದ್ರ ಸರ್ಕಾರ ಕೂಡ ಯಾರನ್ನಾದರೂ ಕಳುಹಿಸಿ ಅರೆಸ್ಟ್ ಮಾಡಲು ಆಗಲ್ಲ. ಇಂಟರ್ ಪೋಲ್ ಕೂಡ ಇರೋದೆ ಅದಕ್ಕಾಗಿ. ನೆಲಮಂಗಲಕ್ಕೆ ಹೋಗಿ ಬಂಧನ ಮಾಡಿಕೊಂಡು ಬಂದಂಗೆ ಅಲ್ಲ. ಕಾನೂನು ಪ್ರಕಾರ ವಾರೆಂಟ್ ಜಾರಿಯಾಗಿದೆ. ಅದರಂತೆ ಏರ್‌ಪೋರ್ಟ್‌ನಲ್ಲೇ ಬಂಧನವಾಗಬೇಕು. ಬಂಧನಕ್ಕೆ ಅದರದ್ದೇ ಆದ ಪ್ರಕ್ರಿಯೆ ಇದೆ ಎಂದು ಅವರು ಹೇಳಿದ್ದಾರೆ.
ರದ್ದತಿಗೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕಾನೂನು ಪ್ರಕ್ರಿಯೆ ನೋಡಿ ರದ್ದು ಮಾಡ್ತಾರೆ. ಈ ಪ್ರಕ್ರಿಯೆಯಲ್ಲಿ ನಿಧಾನಗತಿ ಆಗಿದೆ. ಈಗ ರದ್ದು ಮಾಡುತ್ತೇವೆ ಎಂದಿದ್ದಾರೆ. ಪ್ರಜ್ವಲ್ ಪ್ರಕರಣ ಚುನಾವಣೆ ಮೇಲೆ ಎಫೆಕ್ಟ್ ಆಗುತ್ತೆ ಎಂಬ ಬಗ್ಗೆ ಗೊತ್ತಿಲ್ಲ. ಕಾನೂನು ಪ್ರಕಾರ ಎಲ್ಲಾ ಕ್ರಮವಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…