ಬೆಳಗಾವಿ : ಇಂದು ಒಬ್ಬರ ಸಿಡಿ ಹೊರಬಂದಿದೆ. ಮುಂದೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಸಿಡಿಯೂ ಹೊರಬರಬಹುದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಒಬ್ಬರಿಗೆ ಆಗಿದೆ. ಮುಂದೆ ಸಿಎಂ ಸಿದ್ದರಾಮಯ್ಯನವರಿಗೂ ಆಗಬಹುದು. ಮೊದಲಿನಿಂದಲೂ ನಾನು ಸಿಡಿ ಬಗ್ಗೆ ಹೇಳಿಕೊಂಡೆ ಬಂದಿದ್ದೇನೆ. ಆಗ ಎಲ್ಲರೂ ನನ್ನ ಮಾತು ನಿರ್ಲಕ್ಷ್ಯ ಮಾಡಿದರು. ಇಂದು ಒಬ್ಬರಿಗೆ ಆಗಿದೆ. ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಅವರಿಗೂ ಆಗಬಹುದು. ಅವರ ಸಿಡಿಯೂ ಹೊರಬರಬಹುದು ಎಂದು ಹೇಳಿದ್ದಾರೆ.
ನಾನು ಸಿಎಂ ಸಿದ್ದರಾಮಯ್ಯನವರಿಗೆ, ಗೃಹ ಸಚಿವ ಪರಮೇಶ್ವರ್ ಅವರಿಗೆ ಕೈಮುಗಿದು ಕೇಳಿಕೊಳ್ಳುತ್ತೇನೆ. ಪಕ್ಷಾತೀತವಾಗಿ ಇಂತಹ ಪ್ರಕರಣಗಳಿಗೆ ಇತಿಶ್ರೀ ಹಾಡಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ಕೇಸ್ ಯಾರು ಹೆಮ್ಮೆ ಪಡುವ ವಿಷಯ ಅಲ್ಲ. ಎಲ್ಲರೂ ತಲೆ ತಗ್ಗಿಸುವ ವಿಷಯ, ಬಹಳ ಕೆಟ್ಟ ಪ್ರಮಾಣದಲ್ಲಿ ಆಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಸಮಾಧಾನ ಹೊರಹಾಕಿದ್ದಾರೆ.
ಮತ ಹಾಕುವ ಮುನ್ನ ಬೆಳಗಾವಿಯ ಗೋಕಾಕ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಬಗ್ಗೆ ಮಾತನಾಡಿದರು. ಪ್ರಜ್ವಲ್ ರೇವಣ್ಣ ಕೇಸ್ ಎಲ್ಲರೂ ತಲೆ ತಗ್ಗಿಸುವ ವಿಷಯ. ರೇವಣ್ಣ ಅವರು ಬೇಕಿದ್ದರೆ ಕಾನೂನು ರೀತಿ ಹೋರಾಟ ಮಾಡಲಿ ಎಂದು ನುಡಿದರು.
ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಡಿಕೆ ಶಿವಕುಮಾರ್ ಆಡಿಯೋ ರಿಲೀಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಚಿವರು, ಇದರಲ್ಲಿ ಡಿಕೆಶಿ ನೇರವಾಗಿ ಭಾಗಿಯಾಗಿರುವ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ. ನನ್ನ ಕೇಸ್‌ನಲ್ಲೂ ಡಿಕೆಶಿ ಮಾತನಾಡಿರುವ ಸಾಕ್ಷಿ ಇದೆ, ಅದನ್ನೇ ಕೊಡುತ್ತೇನೆ. ನನ್ನ ಬಗ್ಗೆ ಷಡ್ಯಂತ್ರ ಮಾಡಿದ್ದಕ್ಕೆ ಸಾಕ್ಷಿಗಳೂ ಇವೆ ಎಂದು ಹೇಳಿದರು.
ನನ್ನ ಕೇಸ್‌ನಲ್ಲಿ ನಮ್ಮವರೂ ಇದ್ದಾರೆ:
ಮಹಾನ್ ನಾಯಕ ಹಣದಲ್ಲಿ ಬಹಳಷ್ಟು ಪ್ರಭಾವಿ ಇದ್ದಾರೆ. ಹಣ ಕೊಟ್ಟು ಎಲ್ಲವನ್ನೂ ಖರೀದಿ ಮಾಡಬೇಕು ಅನ್ನೋ ಸೊಕ್ಕು ಇದೆ. ದೇಶದಲ್ಲಿ ಕಾನೂನು ಉಳಿಯಬೇಕು ಅಂದ್ರೆ, ಇದು ನಿಲ್ಲಬೇಕು. ನನ್ನ ಕೇಸ್‌ನಲ್ಲಿ ಡಿಕೆಶಿ ಮಾತ್ರ ಭಾಗಿಯಾಗಿಲ್ಲ. ನಮ್ಮವರೂ ಇದ್ದಾರೆ. ಜೂನ್ 4ರ ನಂತರ ಎಲ್ಲವನ್ನೂ ಬಹಿರಂಗ ಪಡಿಸುತ್ತೇನೆ ಎಂದು ಎಚ್ಚರಿಸಿದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…