Featured

ಪ್ರಜ್ವಲ್ ರೇವಣ್ಣ ಕೇಸ್  ಯಾರು ಹೆಮ್ಮೆ ಪಡುವ ವಿಷಯ ಅಲ್ಲ, ಎಲ್ಲರೂ ತಲೆ ತಗ್ಗಿಸುವ ವಿಷಯ: ರಮೇಶ್ ಜಾರಕಿಹೊಳಿ – Vishwanews24

ಮುಂದೆ ಸಿಎಂ. ಸಿದ್ದರಾಮಯ್ಯ, ಪರಮೇಶ್ವರ್ ಸಿಡಿಯೂ ಬರಬಹುದು :  ರಮೇಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ

ಬೆಳಗಾವಿ : ಇಂದು ಒಬ್ಬರ ಸಿಡಿ ಹೊರಬಂದಿದೆ. ಮುಂದೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಸಿಡಿಯೂ ಹೊರಬರಬಹುದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಒಬ್ಬರಿಗೆ ಆಗಿದೆ. ಮುಂದೆ ಸಿಎಂ ಸಿದ್ದರಾಮಯ್ಯನವರಿಗೂ ಆಗಬಹುದು. ಮೊದಲಿನಿಂದಲೂ ನಾನು ಸಿಡಿ ಬಗ್ಗೆ ಹೇಳಿಕೊಂಡೆ ಬಂದಿದ್ದೇನೆ. ಆಗ ಎಲ್ಲರೂ ನನ್ನ ಮಾತು ನಿರ್ಲಕ್ಷ್ಯ ಮಾಡಿದರು. ಇಂದು ಒಬ್ಬರಿಗೆ ಆಗಿದೆ. ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಅವರಿಗೂ ಆಗಬಹುದು. ಅವರ ಸಿಡಿಯೂ ಹೊರಬರಬಹುದು ಎಂದು ಹೇಳಿದ್ದಾರೆ.

ನಾನು ಸಿಎಂ ಸಿದ್ದರಾಮಯ್ಯನವರಿಗೆ, ಗೃಹ ಸಚಿವ ಪರಮೇಶ್ವರ್ ಅವರಿಗೆ ಕೈಮುಗಿದು ಕೇಳಿಕೊಳ್ಳುತ್ತೇನೆ. ಪಕ್ಷಾತೀತವಾಗಿ ಇಂತಹ ಪ್ರಕರಣಗಳಿಗೆ ಇತಿಶ್ರೀ ಹಾಡಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜ್ವಲ್ ರೇವಣ್ಣ ಕೇಸ್  ಯಾರು ಹೆಮ್ಮೆ ಪಡುವ ವಿಷಯ ಅಲ್ಲ. ಎಲ್ಲರೂ ತಲೆ ತಗ್ಗಿಸುವ ವಿಷಯ, ಬಹಳ ಕೆಟ್ಟ ಪ್ರಮಾಣದಲ್ಲಿ ಆಗಿದೆ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅಸಮಾಧಾನ ಹೊರಹಾಕಿದ್ದಾರೆ.

ಮತ ಹಾಕುವ ಮುನ್ನ ಬೆಳಗಾವಿಯ  ಗೋಕಾಕ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಬಗ್ಗೆ ಮಾತನಾಡಿದರು. ಪ್ರಜ್ವಲ್ ರೇವಣ್ಣ ಕೇಸ್ ಎಲ್ಲರೂ ತಲೆ ತಗ್ಗಿಸುವ ವಿಷಯ. ರೇವಣ್ಣ ಅವರು ಬೇಕಿದ್ದರೆ ಕಾನೂನು ರೀತಿ ಹೋರಾಟ ಮಾಡಲಿ ಎಂದು ನುಡಿದರು.

ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಡಿಕೆ ಶಿವಕುಮಾರ್ ಆಡಿಯೋ ರಿಲೀಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಚಿವರು, ಇದರಲ್ಲಿ ಡಿಕೆಶಿ ನೇರವಾಗಿ ಭಾಗಿಯಾಗಿರುವ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ. ನನ್ನ ಕೇಸ್‌ನಲ್ಲೂ ಡಿಕೆಶಿ ಮಾತನಾಡಿರುವ ಸಾಕ್ಷಿ ಇದೆ, ಅದನ್ನೇ ಕೊಡುತ್ತೇನೆ. ನನ್ನ ಬಗ್ಗೆ ಷಡ್ಯಂತ್ರ ಮಾಡಿದ್ದಕ್ಕೆ ಸಾಕ್ಷಿಗಳೂ ಇವೆ ಎಂದು ಹೇಳಿದರು.

ನನ್ನ ಕೇಸ್‌ನಲ್ಲಿ ನಮ್ಮವರೂ ಇದ್ದಾರೆ:
ಮಹಾನ್ ನಾಯಕ ಹಣದಲ್ಲಿ ಬಹಳಷ್ಟು ಪ್ರಭಾವಿ ಇದ್ದಾರೆ. ಹಣ ಕೊಟ್ಟು ಎಲ್ಲವನ್ನೂ ಖರೀದಿ ಮಾಡಬೇಕು ಅನ್ನೋ ಸೊಕ್ಕು ಇದೆ. ದೇಶದಲ್ಲಿ ಕಾನೂನು ಉಳಿಯಬೇಕು ಅಂದ್ರೆ, ಇದು ನಿಲ್ಲಬೇಕು. ನನ್ನ ಕೇಸ್‌ನಲ್ಲಿ ಡಿಕೆಶಿ ಮಾತ್ರ ಭಾಗಿಯಾಗಿಲ್ಲ. ನಮ್ಮವರೂ ಇದ್ದಾರೆ. ಜೂನ್ 4ರ ನಂತರ ಎಲ್ಲವನ್ನೂ ಬಹಿರಂಗ ಪಡಿಸುತ್ತೇನೆ ಎಂದು ಎಚ್ಚರಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago