ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ಸಂಬಂಧ ನಾನು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ಪಾಸ್ಪೋರ್ಟ್ ರದ್ದತಿ ಅಧಿಕಾರವಿರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಆದರೆ ಪ್ರಜ್ವಲ್ ರೇವಣ್ಣ ಅವರನ್ನು ಕೇಂದ್ರ ಸರಕಾರವೇ ರಕ್ಷಣೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರು ಯಾವುದೇ ದೇಶದಲ್ಲಿದ್ದರು ಹಿಡಿದು ತರುತ್ತೇವೆ. ಹೆಚ್ಡಿ ಕುಮಾರಸ್ವಾಮಿ ಚುನಾವಣೆ ಸಂದರ್ಭ ಪ್ರಜ್ವಲ್ ರೇವಣ್ಣ ನನ್ನ ಮಗ. ನನ್ನ ಮಗ ನಿಖಿಲ್ ಬೇರೆ ಅಲ್ಲ, ಪ್ರಜ್ವಲ್ ರೇವಣ್ಣ ಬೇರೆ ಅಲ್ಲ ಎಂದಿದ್ದರು. ಈಗ ಅವರ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಅಂತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇನ್ನು ಪ್ರಜ್ವಲ್ ರೇವಣ್ಣ ಪ್ರಕರಣ ಮೊದಲೇ ಬಿಜೆಪಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡರು. ಈಗ ಯಾಕೆ ಕ್ರಮ ವಹಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…