Featured

ಪ್ರತಿಪಕ್ಷಗಳ ವಿರೋಧದ ನಡುವೆ ರಾಜ್ಯ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಮಂಡನೆ -Vishwanews24

ಪ್ರತಿಪಕ್ಷಗಳ ವಿರೋಧದ ನಡುವೆ ರಾಜ್ಯ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಮಂಡನೆ -Vishwanews24

ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಬಾರಿಯ ಸದನದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡಿಸುವುದಾಗಿ ತಿಳಿಸಿದ್ದರು. ಅದರಂತೆಯೇ ಇಂದು ವಿಧಾನಸಭೆಯಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾನ್ ಮಂಡಿಸಿದ್ದಾರೆ. ಇಂತಹ ಮಸೂದೆ ಮಂಡನೆಗೆ ಪ್ರತಿಪಕ್ಷಗಳಾದಂತ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ.

ಇಂದು ರಾಜ್ಯ ವಿಧಾನಸಭೆಯಲ್ಲಿ ಕೊನೆಗೂ ಪ್ರಾಣಿಗಳ ಹತ್ಯೆ ಹೆಸರಿನಲ್ಲಿ ನಿಷೇಧ ಹೇರುವ ಹೆಸರಿನಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡಿಸಲ್ಪಟ್ಟಿದೆ. ಪಶು ಸಂಗೋಪಾನಾ ಸಚಿಪ ಪ್ರಭು ಚೌವ್ಹಾಣ್ ಅವರು ಸದನದಲ್ಲಿ ಮಂಡಿಸಿದರು. ಆದ್ರೇ ಗೋ ಹತ್ಯೆ ವಿಷೇಧ ವಿಧೇಯಕ ಮಂಡನೆಗೆ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ತೀವ್ರ ವಿರೋಧ ವ್ಯಕ್ತ ಪಡಿಸಿವೆ. ಸದನದ ಭಾವಿಗೆ ಇಳಿದು, ಕಾಂಗ್ರೆಸ್, ಜೆಡಿಎಸ್ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದರು

ಈ ವೇಳೆ ಮಧ್ಯ ಪ್ರವೇಶಿಸಿದಂತ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ನಾವು ನಾಳೆ ಹೊಸ ಬಿಲ್ ಗಳನ್ನು ಪಾಸ್ ಮಾಡಿಕೊಡೋದಿಲ್ಲ ಎಂಬುದಾಗಿ ಹೇಳಿದ್ವಿ. ಹೊಸ ಬಿಲ್ ಗಳನ್ನು ಹೊರತಾಗಿ ಬೇರೆ ಬಿಲ್ ಗಳನ್ನು ತಿದ್ದುಪಡಿ ಮಾಡಿಕೊಡುತ್ತೇವೆ ಎಂಬುದಾಗಿ ತಿಳಿಸಿದ್ವಿ. ನಾನು ಈ ಗೋ ಹತ್ಯೆ ನಿಷೇಧ ವಿಧೇಯಕಕ್ಕೆ ವಿರೋಧ ವ್ಯಕ್ತ ಪಡಿಸುವುದಾಗಿ ವಿರೋಧ ವ್ಯಕ್ತ ಪಡಿಸಿದರು.

ಸರಕಾರದ ಧೋರಣೆಯನ್ನು ಖಂಡಿಸಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಸ್ಪೀಕರ್ ಪೀಠದ ಎದುರಿನ ಬಾವಿಗಿಳಿದು ಧರಣಿ ನಡೆಸಿದರು. ಈ ವೇಳೆ ಆಡಳಿತ ಹಾಗೂ ಪ್ರತಿಪಕ್ಷಗಳ ಸದಸ್ಯರ ನಡುವೆ ವಾಗ್ವಾದ ನಡೆಯಿತು. ವಿಪಕ್ಷಗಳು ಸರಕಾರದ ವಿರುದ್ಧ ಹಾಗೂ ಆಡಳಿತ ಪಕ್ಷದ ಸದಸ್ಯರು ವಿಪಕ್ಷದ ಸದಸ್ಯರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು. ಈ ಗದ್ದಲದ ವಾತಾವರಣದಲ್ಲಿಯೇ ಪ್ರಭು ಚವ್ಹಾಣ್ ವಿಧೇಯಕವನ್ನು ಮಂಡನೆ ಮಾಡಿದರು.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

5 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

7 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

7 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

7 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

7 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

8 hours ago