ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ಗಾಂಧಿ ತೀವ್ರ ವಾಗ್ದಾಳಿ – vishwanews24
ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ತೀವ್ರ ವಾಗ್ದಾಳಿ
ನವದೆಹಲಿ: ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಸಿಜೆಪಿ ವಿದ್ಯಾರ್ಥಿ ಪ್ರತಿಭಟನೆ ಹಾಗೂ ನೀಟ್ ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳನ್ನು ಮೋದಿ ಸರ್ಕಾರ ದೇಶದ ಶತ್ರುಗಳು ಎಂಬಂತೆ ನಡೆಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಮಾಧ್ಯಮದಲ್ಲಿ ಪ್ರಕಟವಾದ ಲೇಖನದಲ್ಲಿ ಈ ಕುರಿತು ವಿಸ್ತೃತವಾಗಿ ಬರೆದಿರುವ ಸೋನಿಯಾ ಗಾಂಧಿ, ಸರ್ಕಾರದ ಧೋರಣೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.
ಜುಲೈ 20 ರಂದು ದೆಹಲಿ ಪೊಲೀಸ್ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಟೀಯರ್ ಗ್ಯಾಸ್ ಮತ್ತು ಪೆಲೆಟ್ಗಳನ್ನು ಬಳಸಿ ಹಿಂಸಾತ್ಮಕವಾಗಿ ಹತ್ತಿಕ್ಕಲು ಯತ್ನಿಸಿವೆ. ಮನೆಗೆ ಮರಳುತ್ತಿದ್ದ ವಿದ್ಯಾರ್ಥಿಗಳನ್ನೂ ಬಿಡದೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಸೋನಿಯಾ ಗಾಂಧಿ ಕಿಡಿಕಾರಿದ್ದಾರೆ.
