ಕಾಪು : ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯ ವಿರುದ್ಧ ಕಾಪು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ವೇಳೆ ಕೋವಿಡ್ ನಿಯಮವನ್ನು ಸಂಪೂರ್ಣವಾಗಿ ಉಲ್ಲಂಘಿಸಿದ್ದು, ಅಧಿಕಾರಿಗಳು ಮೂಕ ಪ್ರೇಕ್ಷರಾದ ಘಟನೆ ಶನಿವಾರ ನಡೆದಿದೆ.
ಕೆಪಿಸಿಸಿ ನಿರ್ದೆಶನದಂತೆ ಡೀಸೆಲ್ – ಪೆಟ್ರೋಲ್ ದರ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕೋವಿಡ್ ನಿಯಮದ ಸಾಮಾಜಿಕ ಅಂತರ ಉಲ್ಲಂಘಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಕಾಪು ಪೆಟ್ರೋಲ್ ಬಂಕ್ ಮುಂಭಾಗ ಕೇಕ್ ಕತ್ತರಿಸಿ ಪ್ರತಿಭಟನೆ ನಡೆಸಿದರು.
ನೂರಾರು ಮಂದಿ ಗುಂಪಾಗಿ ಸೇರಿಕೊಂಡು ಪೆಟ್ರೋಲ್ ಬಂಕಿನಲ್ಲಿ ದರ ಏರಿಕೆಯ ನೆಪದಲ್ಲಿ ಪ್ರತಿಭಟನೆ ನಡೆಸಿದರೆ ಕೋವಿಡ್ ನಿಯಮ ಅನ್ವಯವಾಗುವುದಿಲ್ಲವೇ…?ಸಣ್ಣಪುಟ್ಟ ವಿಚಾರಕ್ಕೆ ಕೋವಿಡ್ ನಿಯಮ ಉಲ್ಲಂಘನೆ ಯ ಬಗ್ಗೆ ಕೇಸು ದಾಖಲಿಸುವ ಅಧಿಕಾರಿಗಳಿಗೆ ಈ ಪ್ರತಿಭಟನೆ ಮರೆಮಾಚಿ ಹೋಯಿತೆ..? ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದರೂ ನೂರಾರು ಮಂದಿ ಗುಂಪಾಗಿ ಸೇರಲು ಅವಕಾಶ ಇದೆಯೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಕಾನೂನು ಉಲ್ಲಂಘಿಸಿದ ಜನರಿಂದ ದಂಡ ವಸೂಲಿ ಮಾಡಲು ಹೇಳುವ ಜಿಲ್ಲಾಧಿಕಾರಿ, ತಹಶಿಲ್ದಾರ್,ಈ ಬಗ್ಗೆ ಮೌನ ಮುರಿದು ದಂಡ ವಿಧಿಸುವರೇ ಎಂಬುದು ಕಾದು ನೋಡಬೇಕಿದೆ.
ಬ್ಯೂರೋ ರಿಪೋರ್ಟ್ – ವಿಶ್ವನ್ಯೂಸ್24
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…