ನವದೆಹಲಿ: ಸೈನಿಕರ ನೇಮಕಾತಿಯ ಹೊಸ ನೀತಿ ‘ಅಗ್ನಿಪಥ ಯೋಜನೆ’ ವಿರುದ್ಧ ಪ್ರತಿಭಟನೆಗಳು ತೀವ್ರಗೊಳ್ಳುತ್ತಿವೆ. ಇದರ ನಡುವೆಯೇ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಹಾಗೂ ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ ‘ಅಗ್ನಿವೀರ’ರಿಗೆ ಶೇ 10ರಷ್ಟು ಮೀಸಲಾತಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಸಂಬಂಧ ಕೇಂದ್ರ ಗೃಹ ಇಲಾಖೆಯ ಟ್ವಿಟರ್ ಪುಟದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.
ಮೀಸಲಾತಿ ಮಾತ್ರವಲ್ಲದೆ, ನೇಮಕಾತಿ ವೇಳೆ ಗರಿಷ್ಠ ವಯೋಮಿತಿಯಲ್ಲಿ ‘ಅಗ್ನಿವೀರ’ರಿಗೆ ಮೂರು ವರ್ಷಗಳ ಸಡಿಲಿಕೆ ನೀಡಲಾಗುತ್ತದೆ. ಮೊದಲ ಬ್ಯಾಚ್‌ನ ‘ಅಗ್ನಿವೀರ’ರಿಗೆ ಗರಿಷ್ಠ ವಯೋಮಿತಿಯಲ್ಲಿ ಐದು ವರ್ಷಗಳ ವರೆಗೆ ಸಡಿಲಿಕೆ ನೀಡಲಾಗುವುದು ಎಂದೂ ಹೇಳಲಾಗಿದೆ.
ಯುವಕರನ್ನು ಸೇನೆಗೆ ಅಲ್ಪಾವಧಿಗೆ ನೇಮಕ ಮಾಡಿಕೊಳ್ಳುವ ‘ಅಗ್ನಿಪಥ ಯೋಜನೆ’ಯನ್ನು ಕೇಂದ್ರ ಸರ್ಕಾರವು ಮಂಗಳವಾರ (ಜೂನ್ 14) ಪ್ರಕಟಿಸಿತ್ತು. ಇದನ್ನು ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…