Featured

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ ಹಾಗೂ ಶಾಲಾ ಶುಲ್ಕ ಭರಿಸಲು ಆರ್ಥಿಕ ನೆರವು ನೀಡಿದ ಶಾಸಕ ಜಮೀರ್ ಅಹ್ಮದ್ ಖಾನ್ – VIshwanews24

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ ಹಾಗೂ ಶಾಲಾ ಶುಲ್ಕ ಭರಿಸಲು ಆರ್ಥಿಕ ನೆರವು ನೀಡಿದ ಶಾಸಕ ಜಮೀರ್ ಅಹ್ಮದ್ ಖಾನ್

ಬೆಂಗಳೂರು: ನನಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಲಿಲ್ಲ ಎಂಬ ಕೊರಗು ಯಾವಾಗಲೂ ಕಾಡುತ್ತಿರುತ್ತದೆ. ಇದರಿಂದಾಗಿ ನನ್ನ ಕ್ಷೇತ್ರದ ವಿದ್ಯಾರ್ಥಿಗಳ ವಿಚಾರದಲ್ಲಿ ಹಾಗಾಗಬಾರದು ಎಂದು ದ್ವಿಚಕ್ರ ವಾಹನವನ್ನು ವಿತರಿಸುತ್ತಿದ್ದೇನೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಚಾಮರಾಜಪೇಟೆ ಕ್ಷೇತ್ರದ ಎಸ್‍ಎಸ್‍ಎಲ್‍ಸಿಯಲ್ಲಿ 19 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನಗಳ ವಿತರಣೆ ಹಾಗೂ ಹಲವು ವಿದ್ಯಾರ್ಥಿಗಳ ಶಾಲಾ ಶುಲ್ಕ ಭರಿಸಲು ತಲಾ 50,000 ರೂ. ನೆರವು ಆರ್ಥಿಕ ನೆರವು ನೀಡಿದ ಅವರು, ನಾನು ಇಂದು ಶಾಸಕನಾಗಿದ್ದೇನೆ. ನನ್ನ ಬಳಿ ಅಧಿಕಾರ, ಐಶ್ವರ್ಯ, ಜನರ ಪ್ರೀತಿ ಅಭಿಮಾನ ಎಲ್ಲವೂ ಇದೆ. ಆದರೆ ನನ್ನ ಬಳಿ ವಿದ್ಯೆ ಇಲ್ಲ ಎಂಬ ಕೊರಗಿದೆ. ಇದನ್ನು ನೆನೆಸಿಕೊಂಡು ಅನೇಕ ಬಾರಿ ಕಣ್ಣೀರಿಟ್ಟಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.

ವಿದ್ಯೆ ಇಲ್ಲ ಎಂದರೆ ಏನೂ ಮಾಡಲು ಸಾಧ್ಯವಿಲ್ಲ. ಇದರಿಂದಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಲಿಲ್ಲ ಎಂಬ ಕೊರಗು ಸದಾ ನನ್ನನ್ನು ಕಾಡುತ್ತಿರುತ್ತದೆ. ಹಾಗಾಗಿ, ನನ್ನ ಕ್ಷೇತ್ರದ ವಿದ್ಯಾರ್ಥಿಗಳ ವಿಚಾರದಲ್ಲಿ ಯಾರೂ ವಿದ್ಯೆ ಇಲ್ಲದೇ ಕಷ್ಟ ಅನುಭವಿಸಬಾರದು. ಅದಕ್ಕಾಗಿ ಅವರ ಶಿಕ್ಷಣಕ್ಕೆ ಅಗತ್ಯವಾದ ನೆರವನ್ನು ನಾನು ನೀಡುತ್ತಲೇ ಬಂದಿದ್ದೇನೆ. ಮುಂದೆಯೂ ನೀಡುತ್ತೇನೆ ಎಂದು ತಿಳಿಸಿದರು.

ಚಾಮರಾಜಪೇಟೆ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ವರ್ಷದಿಂದ ವರ್ಷಕ್ಕೆ ಉತ್ತಮ ಫಲಿತಾಂಶ ಪಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಪ್ರತಿವರ್ಷ ನನ್ನ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸಿ, ಕೈಲಾದ ನೆರವು ನೀಡಲು ನಿರ್ಧರಿಸಿದ್ದೇನೆ ಎಂದ ಅವರು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ 19 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನಗಳು ಹಾಗೂ ಇಬ್ಬರು ವಿಶೇಷ ಚೇತನರಿಗೆ ವಿಶೇಷ ತ್ರಿಚಕ್ರ ವಾಹನಗಳನ್ನು ವಿತರಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago