ಪ್ರತಿಯೊಂದು ಗ್ರಾಮ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯ : ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ -Vishwanews24

ಸುಳ್ಯ: ದೇಶದಲ್ಲಿ ಬದಲಾವಣೆಗಳು ಕೆಳ ಹಂತದಿಂದ ಆರಂಭವಾಗಬೇಕು. ಪ್ರತಿಯೊಂದು ಗ್ರಾಮ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯಎಂದು ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಹೇಳಿದ್ದಾರೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್ ಹಾಗೂ ಮಡಪ್ಪಾಡಿ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನಸಾಮಾನ್ಯರು ಪತ್ರಕರ್ತರಲ್ಲಿ ಎಲ್ಲ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ಹೀಗಾಗಿ ಅವರ ಮೂಲಕ ಇಂಥ ಕಾರ್ಯಕ್ರಮಗಳು ನಡೆಯುತ್ತಿರುವುದು ಔಚಿತ್ಯಪೂರ್ಣ ಎಂದು ಅವರು ಹೇಳಿದರು. ಮಂಗಳೂರಿನಲ್ಲಿ ನಡೆದ ಘಟನೆಯ ಸಂದರ್ಭ ಮಾಧ್ಯಮಗಳು ಜವಾಬ್ದಾರಿ ಮಾಧ್ಯಮವಾಗಿ ಕೆಲಸ ಮಾಡಿದೆ ಎಂದು ಅವರು ಪ್ರಶಂಸಿದರು.

ವೈದ್ಯಕೀಯ ಶಿಬಿರವನ್ನು ಸುಳ್ಯ ಶಾಸಕ ಎಸ್.ಅಂಗಾರ ಉದ್ಘಾಟಿಸಿದರು. ಕುತ್ಲೂರಿನಲ್ಲಿ ನಡೆದ ಗ್ರಾಮ ವಾಸ್ತವ್ಯದ ಮಾಹಿತಿ ಪತ್ರವನ್ನು ಅವರು ಬಿಡುಗಡೆಗೊಳಿಸಿದರು. ಮೂಲಭೂತ ಅಗತ್ಯಗಳಿಗೆ ಸಮರ್ಪಕವಾಗಿ ಯೋಜನೆಗಳನ್ನು ಮಾಡದಿರುವುದೇ ಕೆಲಸ ಪೂರ್ಣಗೊಳ್ಳದಿರಲು ಕಾರಣ. ಗ್ರಾಮಾಭಿವೃದ್ದಿಯ ಮೂಲಕ ದೇಶದ ಅಭಿವೃದ್ದಿ ಸಾಧ್ಯವಾಗಲಿ ಎಂದು ಆಶಿಸಿದರು.

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣ ಆರ್, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಮಡಪ್ಪಾಡಿ ಗ್ರಾ.ಪಂ. ಅಧ್ಯಕ್ಷೆ ಶಕುಂತಲಾ ಕೇವಳ, ಉಪಾಧ್ಯಕ್ಷ ಎಂಟಿ. ಹೊನ್ನಪ್ಪ, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ವಿಕ್ರಂ ಅಮಾಟೆ, ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ಜಿ.ಪಂ.ಸದಸ್ಯರಾದ ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ಎಸ್.ಎನ್.ಮನ್ಮಥ, ತಾ.ಪಂ.ಉಪಾಧ್ಯಕ್ಷೆ ಶುಭದಾ ರೈ, ತಾ.ಪಂ.ಸದಸ್ಯ ಉದಯಕುಮಾರ್ ಕೊಪ್ಪಡ್ಕ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್, ಎ.ಪಿ.ಎಂ.ಸಿ. ನಿರ್ದೇಶಕ ವಿನಯಕುಮಾರ್ ಮುಳುಗಾಡು, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಂ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago