Featured

ಪ್ರತಿಯೊಬ್ಬರೂ ಆತ್ಮಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು : ಸಿ.ಎಂ – vishwanews24

ಪ್ರತಿಯೊಬ್ಬರೂ ಆತ್ಮಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು : ಸಿ.ಎಂ

ಬೆಂಗಳೂರು:ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿಯವರ ಮಾತನ್ನು ಪುನರುಚ್ಚರಿಸಿದರು.

ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.ಈಗಿನ ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಈಗಿನ ನ್ಯಾಯಾಲಯಗಳಿಂದ ಎಲ್ಲರಿಗೂ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಯಾರಾದರೂ ಹೊಗಳಲಿ, ತೆಗಳಲಿ. ಟೀಕೆ ಮಾಡಲಿ, ಬಿಡಲಿ. ಉಳಿದವರು ಗುರುತಿಸಲಿ ಬಿಡಲಿ ನಾವು ಪ್ರತಿಯೊಬ್ಬರೂ ಆತ್ಮಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದರು.

ಕೇವಲ ಭಾಷಣದಿಂದ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು ಈಡೇರುವುದಿಲ. ಇವರಿಬ್ಬರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಾನು ಮತ್ತು ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಸಾಗುತ್ತಿದ್ದೇವೆ ಎಂದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅತ್ಯಂತ ಪ್ರಾಮಾಣಿಕ ನಾಯಕರು ಮತ್ತು ರಾಜಕಾರಣಿ. ಇವರೆಲ್ಲರ ಬದುಕಿನ ಸಂದೇಶಗಳು ನಮಗೆ ಮಾರ್ಗದರ್ಶನವಾದರೆ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ನಾವು ಈ ಮಹಾತ್ಮರಿಗೆ ಸಲ್ಲಿಸುವ ಗೌರವ ಎಂದರು‌.ಗಾಂಧಿಯವರ ಹೋರಾಟದಿಂದಾಗಿ ನಾವು ಸ್ವಾಂತ್ರ್ಯದ ಗಾಳಿ ಸೇವಿಸುತ್ತಿದ್ದೇವೆ. ಗಾಂಧಿ ಇಡೀ ಜಗತ್ತಿನ ನಾಯಕರು ಎನ್ನುವ ಗೌರವ ಸಿಕ್ಕಿರುವ ಭಾರತೀಯರಿಗೆ ಸಿಕ್ಕ ಹೆಗ್ಗಳಿಕೆ ಎಂದರು.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

4 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

10 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

11 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

11 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

13 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

13 hours ago