Featured

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ – vishwanews24

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ

ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಕೀಟನಾಶಕಗಳನ್ನು ತಯಾರಿಸಿ ರೈತರಿಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಚಿಕ್ಕಬಳ್ಳಾಪುರದಲ್ಲಿ ಕೃಷಿ ಇಲಾಖೆ ಜಾಗೃತ ದಳ ಅಧಿಕಾರಿಗಳು ಬಯಲಿಗೆ ಎಳೆದಿದ್ದಾರೆ.

ಮನೆಯೊಂದರಲ್ಲಿ ನಡೆಸಲಾಗುತ್ತಿದ್ದ ನಕಲಿ ಕೀಟನಾಶಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, 200 ಲೀಟರ್‌ಗೂ ಹೆಚ್ಚು ವಿವಿಧ ಕೃಷಿ ರಾಸಾಯನಿಕಗಳು, ಪ್ಯಾಕಿಂಗ್ ಸಾಮಗ್ರಿ ಹಾಗೂ 11 ರಿಂದ 12 ಕಂಪನಿಗಳ ಹೆಸರಿನ ನಕಲಿ ಲೇಬಲ್‌ಗಳನ್ನ ವಶಪಡಿಸಿಕೊಂಡಿದ್ದಾರೆ.

ಆರೋಪಿ ಸೋಮಸುಂದರ್ ತಾನು ʻಬೆಳೆ ತಜ್ಞʼ ಎಂದು ಪರಿಚಯಿಸಿಕೊಂಡು ರೈತರ ವಿಶ್ವಾಸ ಗಳಿಸುತ್ತಿದ್ದ. ಬಳಿಕ ದಾಳಿಂಬೆ, ದ್ರಾಕ್ಷಿ, ಮಾವು ಸೇರಿದಂತೆ ತೋಟಗಾರಿಕಾ ಬೆಳೆ ಬೆಳೆಯುವ ರೈತರನ್ನು ಗುರಿಯಾಗಿಸಿಕೊಂಡು ನಕಲಿ ಕೀಟನಾಶಕಗಳನ್ನ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ತಾನೇ ಲೇಬಲ್‌ಗಳನ್ನ ಮುದ್ರಿಸಿ, ಬಾಟಲಿಗಳಿಗೆ ಅಂಟಿಸಿ, ಪ್ಯಾಕಿಂಗ್ ಮಾಡಿ ನೇರವಾಗಿ ರೈತರ ಜಮೀನುಗಳಿಗೆ ತೆರಳಿ ಮಾರಾಟ ಮಾಡುತ್ತಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿ ವೇಳೆ ನಕಲಿ ಲೇಬಲ್‌ಗಳ ಜೊತೆಗೆ ಜಿಎಸ್‌ಟಿ ಸಂಖ್ಯೆಯೂ ನಕಲಿಯಾಗಿರುವುದು ಬೆಳಕಿಗೆ ಬಂದಿದೆ. ವಿಚಾರಣೆ ವೇಳೆ ಆರೋಪಿ ನಕಲಿ ಕೀಟನಾಶಕ ತಯಾರಿಸುತ್ತಿದ್ದುದನ್ನು ಒಪ್ಪಿಕೊಂಡಿದ್ದು, ಕಳೆದ ಮೂರು ದಿನಗಳಿಂದ ಮಾತ್ರ ಈ ಕೆಲಸ ಮಾಡುತ್ತಿದ್ದೇನೆ ಎಂದು ಸಮಜಾಯಿಷಿ ನೀಡಿದ್ದಾನೆ. ಆದರೆ ಈ ಜಾಲ ಎಷ್ಟು ದಿನಗಳಿಂದ ನಡೆಯುತ್ತಿತ್ತು, ಇನ್ನೂ ಎಷ್ಟು ರೈತರು ಮೋಸಕ್ಕೆ ಒಳಗಾಗಿದ್ದಾರೆ ಎಂಬ ಕುರಿತು ಕೃಷಿ ಇಲಾಖೆ ತನಿಖೆ ಮುಂದುವರಿಸಿದೆ.

ಅವಧಿ ಮೀರಿದ ಹಾಗೂ ವಿವಿಧ ರಾಸಾಯನಿಕಗಳನ್ನ ಮಿಶ್ರಣ ಮಾಡಿ ತಯಾರಿಸಿದ ನಕಲಿ ಕೀಟನಾಶಕಗಳು ಬೆಳೆಗಳ ಇಳುವರಿ ಕುಗ್ಗಿಸುವುದಲ್ಲದೇ, ಮಣ್ಣು, ಪರಿಸರ ಮತ್ತು ಆಹಾರ ಸರಪಳಿಯ ಮೇಲೂ ಗಂಭೀರ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ರೈತರು ಅಧಿಕೃತ ಪರವಾನಗಿ ಹೊಂದಿರುವ ಮಾರಾಟ ಕೇಂದ್ರಗಳಿಂದ ಮಾತ್ರ ಕೀಟನಾಶಕಗಳನ್ನ ಖರೀದಿಸಬೇಕು ಹಾಗೂ ಅನುಮಾನಾಸ್ಪದ ಉತ್ಪನ್ನಗಳ ಬಗ್ಗೆ ತಕ್ಷಣ ಕೃಷಿ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago