ಬಂಟ್ವಾಳ: ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ, ಉದ್ಯಮಿ, ಸಮಾಜಿಕ, ಧಾರ್ಮಿಕ ಮುಂದಾಳು ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ತುಂಬೆ (89) ಅವರು ಆ. 16ರಂದು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಟಿಂಬರ್ ಉದ್ಯಮದಲ್ಲಿ ಖ್ಯಾತಿಯನ್ನು ಪಡೆದಿರುವ ಅಹ್ಮದ್ ಹಾಜಿ ಅವರು ಶಿಕ್ಷಣ ಪ್ರೇಮಿಯಾಗಿದ್ದು ಶೈಕ್ಷಣಿಕ ಕ್ಷೇತ್ರದಲ್ಲಿ ಅದ್ವಿತೀಯ ಸಾಧಕರಾಗಿದ್ದಾರೆ. ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲೂ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಬಿ.ಎ.ಸಮೂಹ ಸಂಸ್ಥೆಗಳ ಮೂಲಕ ಸಾವಿರಾರು ಮಂದಿಯ ಉದ್ಯೋಗದಾತರಾಗಿದ್ದರು.
ಮೃತರು ಪತ್ನಿ, ಮೂವರು ಪುತ್ರರು ಮತ್ತು ಒಬ್ಬ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಅಹ್ಮದ್ ಹಾಜಿ ಅವರ ಪಾರ್ಥಿವ ಶರೀರವನ್ನು ಅಪರಾಹ್ನ 3 ಗಂಟೆಗೆ ತುಂಬೆಯಲ್ಲಿರುವ ತುಂಬೆ ಪಿಯು ಕಾಲೇಜಿನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಡಲಾಗುವುದು. 4 ಗಂಟೆಯ ಬಳಿಕ ತುಂಬೆ ಮಸೀದಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…