ಪ್ರತಿ ಜಿಲ್ಲೆಯಲ್ಲಿಯೂ ಒಂದು ವೈದ್ಯಕೀಯ ಕಾಲೇಜು : ಪ್ರಧಾನಿ ಮೋದಿ -Vishwanews24

Featured, ರಾಷ್ಟ್ರ ನ್ಯೂಸ್

ಪ್ರತಿ ಜಿಲ್ಲೆಯಲ್ಲಿಯೂ ಒಂದು ವೈದ್ಯಕೀಯ ಕಾಲೇಜು : ಪ್ರಧಾನಿ ಮೋದಿ -Vishwanews24

ಜೈಪುರ: ಪ್ರತಿ ಜಿಲ್ಲೆಯಲ್ಲಿಯೂ ಒಂದು ವೈದ್ಯಕೀಯ ಕಾಲೇಜು ಅಥವಾ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಸಂಸ್ಥೆ ಇರಬೇಕು ಎಂಬುದನ್ನು ಕಾರ್ಯಗತಗೊಳಿಸಲು ಸರ್ಕಾರ ಯತ್ನಿಸುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದರು.

ಆಯುರ್ವೇದ, ಯೋಗಕ್ಕೂ ಉತ್ತೇಜನ ನೀಡಲಾಗುತ್ತಿದೆ. ಸರ್ಕಾರ ಒಟ್ಟಾರೆಯಾಗಿ ರೋಗ ತಡೆಗಟ್ಟುವ ಆರೋಗ್ಯ ಸೇವಾ ವ್ಯವಸ್ಥೆ ಸ್ಥಾಪನೆಯತ್ತ ಗಮನವನ್ನು ಕೇಂದ್ರೀಕರಿಸಿದೆ. ಪ್ರಸ್ತುತ ದೇಶದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಯ ನಡುವಣ ಅಂತರವು ಕುಗ್ಗಿದೆ ಎಂದು ಅವರು ತಿಳಿಸಿದರು.

ರಾಜಸ್ಥಾನ ಪೆಟ್ರೊಕೆಮಿಕಲ್ಸ್‌ ತಾಂತ್ರಿಕ ಸಂಸ್ಥೆಯ ಉದ್ಘಾಟನೆ ಹಾಗೂ ನಾಲ್ಕು ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಬೆಂಗಳೂರಿಗೆ ರಾಜ್ಯದ ಮೊದಲ ಎಲೆಕ್ಟ್ರಿಕ್ ಬಸ್ -Vishwanews24