ಬೆಂಗಳೂರು: ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳ ಆರಂಭಕ್ಕೆ ಸಾಹಿತ್ಯ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವ ಬೆನ್ನಲ್ಲೇ 224 ವಿಧಾನಸಭಾ ಕ್ಷೇತ್ರಗಳ ಲೆಕ್ಕಾಚಾರದಲ್ಲಿ ಪ್ರತಿ ಕ್ಷೇತ್ರಕ್ಕೆ ತಲಾ ನಾಲ್ಕು ಶಾಲೆಗಳ ಆಯ್ಕೆ ಪ್ರಕ್ರಿಯೆಗೆ ಶಿಕ್ಷಣ ಇಲಾಖೆ ಚಾಲನೆ ನೀಡಿದೆ. ಮುಂದಿನ 4 ವರ್ಷಗಳಲ್ಲಿ ಒಂದು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸುವುದಾಗಿ ಬಜೆಟ್ನಲ್ಲಿ ಘೋಷಿಸಿರುವಂತೆ 1ರಿಂದ 12ನೇ ತರಗತಿಯವರೆಗೆ ಒಂದೇ ಸೂರಿನಡಿ ಕರ್ನಾಟಕ ಪಬ್ಲಿಕ್ ಶಾಲೆ ಹೆಸರಲ್ಲಿ ಆರಂಭಿಸಲು ಇತ್ತೀಚೆಗೆ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು.
ಕ್ಷೇತ್ರಕ್ಕೆ 4ರಂತೆ ಲೆಕ್ಕ ಹಾಕಿದಾಗ ರಾಜ್ಯಾದ್ಯಂತ ಒಟ್ಟು 896 ಶಾಲೆಗಳಾಗಲಿವೆ. 1 ಸಾವಿರ ಶಾಲೆಗಳಿಗೆ 104 ಕೊರತೆ ಆಗುವುದರಿಂದ ಕೆಲವು ಕ್ಷೇತ್ರಗಳಲ್ಲಿ ಹೆಚ್ಚಿನ ಶಾಲೆ ತೆರೆದು ಸರಿದೂಗಿಸಲು ನಿರ್ಧರಿಸಲಾಗಿದೆ.ಕಳೆದ 1 ವರ್ಷದಿಂದಲೇ ರಾಜ್ಯದಲ್ಲಿ 275 ಕರ್ನಾಟಕ ಪಬ್ಲಿಕ್ ಶಾಲೆ ಕಾರ್ಯನಿರ್ವಹಿಸುತ್ತಿವೆ. ಕಳೆದ ವರ್ಷ ಆಯ್ಕೆ ಮಾಡುವಾಗ ಕೆಲವು ವಿಧಾನಸಭಾ ಕೇತ್ರದ ಶಾಸಕರು ತಮ್ಮ ವ್ಯಾಪ್ತಿಗೆ ಕಡಿಮೆ ಶಾಲೆಗಳು ಬಂದಿವೆ ಎಂದು ಗಲಾಟೆ ಮಾಡಿದ್ದರು.
ಇದೀಗ ಮೈತ್ರಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಎಲ್ಲ ಶಾಸಕರನ್ನು ಗಣನೆಗೆ ತೆಗೆದುಕೊಳ್ಳುವುದು ಮುಖ್ಯಮಂತ್ರಿ ಹಾಗೂ ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವರೂ ಆಗಿರುವ ಎಚ್.ಡಿ.ಕುಮಾರಸ್ವಾಮಿಗೆ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕರ ಸಮಾಧಾನಕ್ಕೆ ಹಾಗೂ ಸಾರ್ವಜನಿಕರಿಗೆ ಸಮಾನವಾಗಿ ಶಾಲೆ ಹಂಚಿಕೆ ಮಾಡಲು ಶಿಕ್ಷಣ ಇಲಾಖೆ ಪ್ರತಿ ಕ್ಷೇತ್ರಕ್ಕೆ 4 ಶಾಲೆ ಆಯ್ಕೆ ಮಾಡಲು ನಿರ್ಧರಿಸಿದೆ.
ಏನಿದು ಆಂಗ್ಲಶಾಲೆ?
ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪೂರ್ವ ಪ್ರಾಥಮಿಕದಿಂದ 12ನೇ ತರಗತಿಯವರೆಗೂ ಒಂದೇ ಆವರಣದಲ್ಲಿ ಇರಲಿದೆ. ವಿದ್ಯಾರ್ಥಿಗಳು ಅರ್ಧಕ್ಕೆ ಶಾಲೆ ತೊರೆಯುವುದನ್ನು ತಪ್ಪಿಸುವ ಸಲುವಾಗಿ ಈ ರೀತಿ ಶಾಲೆ ತೆರೆಯಲು ನಿರ್ಧರಿಸಿದೆ.
ಒಂದು ಸಾವಿರ ಶಾಲೆಗಳ ಆಯ್ಕೆಗೆ ಸೂಚನೆ ನೀಡಲಾಗಿದೆ. ಆಂಗ್ಲ ಮಾಧ್ಯಮ ಬೋಧನಾ ಪಠ್ಯಕ್ರಮವನ್ನು ಪ್ರಾದೇಶಿಕ ಅಂಗ್ಲ ಕೇಂದ್ರ ರಚಿಸಲು ಮುಂದಾಗಿದೆ.
|ಪಿ.ಸಿ.ಜಾಫರ್, ಆಯುಕ್ತ, ಸಾರ್ವಜನಿಕ ಶಿಕ್ಷಣ ಇಲಾಖೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…