ಮಂಗಳೂರು, : ”ಬುಧವಾರ ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ನಡೆಯಲಿದ್ದು, ಈ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಮನೆಯಲ್ಲಿಯೇ ಪೂಜೆ ಮಾಡಿ, ಬೀದಿಯಲ್ಲಿ ಪೂಜೆ ಮಾಡಿ, ಪಟಾಕಿ ಸಿಡಿಸಿ, ಮೆರವಣಿಗೆ ಮಾಡುವುದನ್ನು ಮಾಡಬೇಡಿ. ಅಯೋಧ್ಯೆಯಂತಹ ಸೂಕ್ಷ್ಮ ವಿಚಾರದಲ್ಲಿ ಯಾರ ಭಾವನೆಗೂ ಧಕ್ಕೆ ಉಂಟಾಗಬಾರದು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿಜೆಪಿ ಕಾರ್ಯಕರ್ತರಿಗೆ ತಿಳಿಸಿದ್ದಾರೆ.
”ಎಲ್ಲಾ ಕಾರ್ಯಕರ್ತರು ಜವಾಬ್ದಾರಿಯಿಂದ ವರ್ತಿಸಬೇಕು. ಗುಂಪು ಸೇರಿ ಸಂಭ್ರಮಾಚರಣೆ ಮಾಡಬೇಡಿ, ಪ್ರತಿ ಮನೆಗಳಲ್ಲಿ ದೀಪ ಹಚ್ಚುವ ಮೂಲಕ ರಾಮಮಂದಿರದ ಭೂಮಿ ಪೂಜೆಯನ್ನು ಸಂಭ್ರಮಿಸಿ, ಬದಲಾಗಿ ಗುಂಪುಗೂಡಿ, ಪಟಾಕಿ ಸಿಡಿಸಬೇಡಿ. ದೇವಸ್ಥಾನಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ದೀಪ ಬೆಳಗಿಸಿ” ಎಂದು ಮನವಿ ಮಾಡಿದ್ದಾರೆ.
”ಹಾಗೆಯೇ ಬುಧವಾರ ಬೆಳಿಗ್ಗೆ 8 ರಿಂದ 12 ರವರೆಗೆ ನಡೆಯಲಿರುವ ಈ ಕಾರ್ಯಕ್ರಮ ಟಿವಿಯಲ್ಲಿ ನೇರ ಪ್ರಸಾರವಾಗಲಿದೆ, ಸಾಮಾಜಿಕ ಜಾಲತಾಣದಲ್ಲೂ ಲೈವ್ ಇರಲಿದೆ. ಅದರ ಮೂಲಕ ಜನರು ವೀಕ್ಷಿಸಬಹುದು” ಎಂದು ತಿಳಿಸಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…