Featured

ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ ಅದನ್ನೆ ರಾಜಕೀಯ ಮಾಡಬಾರದು: ದಿನೇಶ್ ಗುಂಡೂರಾವ್ – vishwanews24

ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ ಅದನ್ನೆ ರಾಜಕೀಯ ಮಾಡಬಾರದು: ದಿನೇಶ್ ಗುಂಡೂರಾವ್

ಬೆಳಗಾವಿ: ಬಾಣಂತಿಯರ ಮರಣಗಳು ಆಗುತ್ತಿವೆ, ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವುದಕ್ಕೂ ಮುನ್ನ ಮಾತನಾಡಿದ ಅವರು, ಬಾಣಂತಿಯರ ಸಾವಿನ ವಿಚಾರವಾಗಿ ಅಧಿವೇಶನದಲ್ಲಿ ಗಂಭೀರವಾಗಿ ಚರ್ಚೆ ಆಗಬೇಕು. ಅದಕ್ಕೆ ನಾವು ಉತ್ತರ ನೀಡುತ್ತೇವೆ ಎಂದರು.

ಬಾಣಂತಿಯರ ಸಾವಿನ ಬಗ್ಗೆ ನಿಜಾಂಶಗಳ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ಬಾಣಂತಿಯರ ಮರಣಗಳು ಆಗುತ್ತಿವೆ, ಅದಕ್ಕೆ ವೈದ್ಯಕೀಯ ಕಾರಣ ಎನ್ನಲಾಗದು. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಅವರು ವಿರೋಧ ಪಕ್ಷಗಳ ವಿರುದ್ದ ಕಿಡಿ ಕಾರಿದರು.

ವ್ಯವಸ್ಥೆಗಳನ್ನು ಸರಿಪಡಿಸುವ ಕೆಲಸ ಸಾಕಷ್ಟು ಆಗುತ್ತಿದೆ. ಬಾಣಂತಿಯರ ಮರಣಗಳ ಬಗ್ಗೆ ಬೆಳಗಾವಿ ಅಧಿವೇಶನಲ್ಲಿ ಉತ್ತರ ಕೊಡಲಾಗುವುದು. ಸರ್ಕಾರ ಮೇಡಿಕಲ್ ಮಾಫಿಯಾ ಹಿಡಿತಕ್ಕೆ ಸಿಲುಕಿದೆಯಾ ಎಂಬ ವಿಚಾರವಾಗಿ ಸದನದಲ್ಲಿ ನಾನು ಚರ್ಚೆ ಮಾಡುತ್ತೇನೆ ಎಂದರು. ಆರೋಗ್ಯ ಇಲಾಖೆ ಬಗ್ಗೆ ಮಾತನಾಡಬೇಕು. ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಮರಣದ ವಿಚಾರವಾಗಿ ನಮಗೆ ಬಹಳ ಚಿಂತೆ ಇದೆ. ಸರ್ಕಾರವೂ ಎಚ್ಚೆತ್ತುಕೊಂಡಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತವಾದ ಚಿಕಿತ್ಸೆ ಸಿಗುತ್ತಿಲ್ಲ, ಬಡವರು ಸರ್ಕಾರಿ ಆಸ್ಪತ್ರೆಗೆ ಬರಲು ಭಯ ಪಡುವಂತಾಗಿದೆ ಎಂಬ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಾಗೇನಿಲ್ಲ ಎಂದು ಸಮಜಾಯಿಷಿ ನೀಡಿದರು.

Vishwa News 24

Recent Posts

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

9 minutes ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

52 minutes ago

ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ – vishwanews24

ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…

58 minutes ago

ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ – vishwanews24

ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ…

1 hour ago

ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ – vishwanews24

ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ…

1 hour ago

ಬೆಂಗಳೂರು: ಯಾವುದೇ ಕಾರಣಕ್ಕೂ ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ – vishwanews24

ಬೆಂಗಳೂರು: ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…

2 hours ago