ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ ಸಂಸದ ಡಿ.ಕೆ ಸುರೇಶ್ – vishwanews24

Featured, ರಾಜ್ಯ ನ್ಯೂಸ್

ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ ಸಂಸದ ಡಿ.ಕೆ ಸುರೇಶ್

ಬೆಂಗಳೂರು: ಕರ್ನಾಟಕದಲ್ಲಿ ಪ್ರತ್ಯೇಕ ರಾಜ್ಯದ ಕೂಗಿನ ಬೆನ್ನಲ್ಲೇ, ಸಂಸದ ಡಿ.ಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ್ದಾರೆ. ಈ ಮೂಲಕ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದಕ್ಷಿಣ ಭಾರತದ ಹಣವನ್ನು ಉತ್ತರ ಭಾರತಕ್ಕೆ ಹಂಚಿಕೆ ಮಾಡ್ತಿದ್ದಾರೆ. ಇದರಿಂದ ನಮಗೆ ಆರ್ಥಿಕವಾಗಿ ತೊಂದರೆಯಾಗ್ತಿದೆ ಎಂದರು.

ನಮ್ಮ ರಾಜ್ಯದ ಹಣ ನಮಗೇ ಹಂಚಿಕೆಯಾಗಬೇಕಾದ್ರೇ ಪ್ರತ್ಯೇಕ ರಾಷ್ಟ್ರದ ಕೂಗು ಅನಿವಾರ್ಯವಾಗಿದೆ. ಹೀಗಾಗಿ ದಕ್ಷಿಣ ಭಾರತದ ಕೂಗು ಎತ್ತಬೇಕಾಗುತ್ತದೆ. ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರದ ಕೂಗು ಏಳಲಿದೆ ಎಂದರು.

ಕಾಪು : ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಐಕಳಬಾವ ಡಾ| ದೇವಿಪ್ರಸಾದ್‌ ಶೆಟ್ಟಿ ಅವಿರೋಧ ಆಯ್ಕೆ – vishwanews24

ಕೇಂದ್ರ ಸರ್ಕಾರದ ಇದಕ್ಕೂ ಮುನ್ನ ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬೇಕು. ದಕ್ಷಿಣ ಭಾರತದ ಹಣವನ್ನು ದಕ್ಷಿಣ ಭಾರತಕ್ಕೆ ಖರ್ಚು ಮಾಡಬೇಕು. ಉತ್ತರ ಭಾರತಕ್ಕೆ ಹಂಚಿಕೆ ಮಾಡಬಾರದು ಎಂಬುದಾಗಿ ತಿಳಿಸಿದರು.

Leave a Reply