Featured

ಪ್ರಥಮ ಬಾರಿಗೆ ಉಡುಪಿ ಆಗಮಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ -Vishwanews24

ಉಡುಪಿ: ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಆಯ್ಕೆಯಾದ ಬಳಿಕ ಶುಕ್ರವಾರ ಪ್ರಥಮ ಬಾರಿ ಜಿಲ್ಲೆಗೆ ಆಗಮಿಸಿದರು.

ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿ ಜಿಲ್ಲೆಗೆ ಆಗಮಿಸಿದ ಸಚಿವರನ್ನು ಜಿಲ್ಲಾಡಳಿತದ ಪರವಾಗಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್, ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಕರಾವಳಿ ಕಾವಲು ಪೊಲೀಸ್ ಪಡೆಯ ವರಿಷ್ಠಾಧಿಕಾರಿ ಚೇತನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.

ಈ ಸಂದರ್ಭ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವರು ,ಪೊಲೀಸರ ವೇತನ ಪರಿಷ್ಕರಣೆ ವಿಚಾರವಾಗಿ ಕೆಲವಿಷಯಗಳನ್ನು ಹಂಚಿಕೊಂಡರು.ಖಂಡಿತವಾಗಿಯೂ ಔರಾದ್ಕರ್ ವರದಿ ಜಾರಿಯಾಗುತ್ತದೆ.

ಔರಾದ್ಕರ್ ವರದಿಗೆ ಎರಡು ಹಂತದಲ್ಲಿ ಸಚಿವ ಸಂಪುಟ ಒಪ್ಪಿಗೆಯನ್ನೂ ಕೊಟ್ಟಿದೆ.ಆದ್ರೆ ಜೈಲು ಸಿಬ್ಬಂದಿ ಮತ್ತು ಫೈಯರ್ ಫೋರ್ಸ್ ಬಿಟ್ಟು ಹೋಗಿತ್ತು. ನಮ್ಮ ಕ್ಯಾಬಿನೆಟ್ ನಲ್ಲಿ ಅವಕ್ಕೂ ಒಪ್ಪಿಗೆ ಕೊಟ್ಟಿದ್ದೇವೆ.ಆರ್ಥಿಕ‌ ಇಲಾಖೆಯಿಂದ ಕೆಲವು ಸ್ಪಷ್ಟನೆ ಕೇಳಿದ್ದೇವೆ.ಇನ್ನೊಂದು ವಾರದೊಳಗೆ ಸ್ಪಷ್ಟವಾದ ಸುತ್ತೋಲೆ ಹೊರಡಿಸ್ತೇವೆ ಎಂದು ಹೇಳಿದರು.

ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವರು ,ಎಲ್ಲಾ ಮಾಹಿತಿಗಳು ಸಿಬಿಐ ಬಳಿ ಇರುತ್ತವೆ.ಅಧಿಕೃತವಾಗಿ ಯಾವುದೇ ಮಾಹಿತಿ ನಮಗೆ ಬಂದಿಲ್ಲ. ಗೃಹ ಸಚಿವನಾಗಿ ಊಹಾಪೋಹಗಳಿಗೆ ಉತ್ತರ ಕೊಡುವುದಕ್ಕೆ ಆಗುವುದಿಲ್ಲ.

ಎಸ್ ಐಟಿ ಮಾಡಿರುವ ತನಿಖೆಯ ಸಂಪೂರ್ಣ ವಿವರ ಸಿಬಿಐ ಗೆ ನೀಡಿದ್ದೇವೆ.ಆದರೆ ಅನುಮತಿ‌ ಇಲ್ಲದೆ ಯಾವುದೇ ವ್ಯಕ್ತಿಯ ಖಾಸಗಿ ಮಾತುಕತೆಯ ಕದ್ದಾಲಿಕೆ ಮಾಡುವುದು ತಪ್ಪು ಎಂದು ಹೇಳಿದರು. ಪ್ರಭಾವ ಬಳಸಿ ಉಪ ಚುನಾವಣೆ ಮುಂದೂಡಲಾಗಿದೆ ಎಂಬ ಕುಮಾರಸ್ವಾಮಿ ಆರೋಪದ ಕುರಿತು ಕೇಳಿದ್ದಕ್ಕೆ ,ಕುಮಾರಸ್ವಾಮಿ ಮೊಸರಲ್ಲಿ‌ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದಷ್ಟೇ ಚುಟುಕಾಗಿ ಪ್ರತಿಕ್ರಿಯೆ ನೀಡಿದರು.

ಉಡುಪಿ ಶಾಸಕ ರಘುಪತಿ ಭಟ್, ಕಾರ್ಕಳ ಶಾಸಕ ಸುನೀಲ್ ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ಇತರರು ಉಪಸ್ಥಿತರಿದ್ದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

14 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

18 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

19 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

19 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago