ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ : ಸಂತ್ರಸ್ತೆಯ ವಿರುದ್ಧ ಅಪಪ್ರಚಾರ ಮಾಡಿದ 150 ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಕ್ರಮ : ಉಡುಪಿ ಎಸ್ಪಿ ಎಚ್ಚರಿಕೆ – vishwanews24

Featured, ಉಡುಪಿ

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ : ಸಂತ್ರಸ್ತೆಯ ವಿರುದ್ಧ ಅಪಪ್ರಚಾರ ಮಾಡಿದ  150 ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಕ್ರಮ : ಉಡುಪಿ ಎಸ್ಪಿ ಎಚ್ಚರಿಕೆ

ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಅತ್ಯಾಚಾರ ಸಂತ್ರಸ್ತೆಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವ 150 ಖಾತೆಗಳನ್ನು ಈಗಾಗಲೇ ಗುರುತಿಸಲಾಗಿದೆ.

ಸಂತ್ರಸ್ತೆಯ ಖಾಸಗಿ ಫೋಟೊಗಳನ್ನು ಹಂಚಿಕೊಂಡು ಮಾನಹಾನಿ ಮಾಡಿರುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಎಚ್ಚರಿಕೆ ನೀಡಿದರು.

ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೊ, ಆಡಿಯೊ ದಾಖಲೆಗಳು ಹಾಗೂ ವೈಜ್ಞಾನಿಕ ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ಮಾಹಿತಿ ನೀಡಿದ ಅವರು, ಘಟನೆಯ ಸಂಪೂರ್ಣ ಸತ್ಯಾಂಶ ತಿಳಿಯದೆ ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಂತ್ರಸ್ತೆಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳನ್ನು ಪ್ರಕಟಿಸುತ್ತಿರುವುದು ಖಂಡನೀಯ.

ಉಡುಪಿ  : ವಿಕಲಚೇತನರ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ – vishwanews24

ಪ್ರದೀಪ್ ಪೂಜಾರಿ ಮತ್ತು ಸಂತ್ರಸ್ತೆಗೆ ಸಂಬಂಧಿಸಿದ ಖಾಸಗಿ ಫೋಟೊಗಳನ್ನು ಹಂಚಿಕೊಂಡು ಆಕೆಯ ತೇಜೋವಧೆ ಮಾಡಲಾಗುತ್ತಿದೆ. ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದರು.ಇಂತಹ ಘಟನೆಗಳಿಂದ ಸಂತ್ರಸ್ತ ಮಹಿಳೆಯರನ್ನೇ ಗುರಿಯಾಗಿಸಿದರೆ, ಮುಂದೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ದೂರು ನೀಡಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಬಹುದು.

ಪ್ರದೀಪ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ದುಃಖಕರ. ಆದರೆ, ಆತನಿಗೆ ನ್ಯಾಯ ಕೊಡಿಸುವ ಹೆಸರಿನಲ್ಲಿ ಸಂತ್ರಸ್ತೆಗೆ ಅನ್ಯಾಯ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಸಂತ್ರಸ್ತೆಯ ಮಾನಹಾನಿ ಮಾಡಿದ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮೂರು ಪ್ರತ್ಯೇಕ ಪ್ರಕರಣಗಳು2020ರ ನವೆಂಬರ್ 10ರಂದು ಸಂತ್ರಸ್ತ ಯುವತಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ಪ್ರದೀಪ್ ಪೂಜಾರಿ ಆಕೆಯನ್ನು ಅಡ್ಡಗಟ್ಟಿ, ತನ್ನನ್ನು ಮದುವೆಯಾಗಬೇಕು. ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ.

ಉಡುಪಿ:  ನೇರ ಸಂದರ್ಶನ – vishwanews24

ಈ ಬಗ್ಗೆ ಯುವತಿ ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರದೀಪ್‌ನನ್ನು ಬಂಧಿಸಲಾಗಿತ್ತು.

ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಪ್ರದೀಪ್, 2025ರ ನವೆಂಬರ್ 29ರಂದು ಯುವತಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಆಕೆಯನ್ನು ಕಾಡಿನೊಳಗೆ ಎಳೆದುಕೊಂಡು ಹೋಗಿ, ತಲೆಯ ಮೇಲೆ ಕಲ್ಲು ಹಾಕುವುದಾಗಿ ಬೆದರಿಸಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪವಿದೆ.

ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿತ್ತು. ಸಂತ್ರಸ್ತೆಯ ಹೇಳಿಕೆ, ವೈದ್ಯರ ಹೇಳಿಕೆ ಹಾಗೂ ವೈಜ್ಞಾನಿಕ ಸಾಕ್ಷ್ಯಗಳ ಆಧಾರದಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಎಸ್ಪಿ ವಿವರಿಸಿದರು.ಮತ್ತೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಪ್ರದೀಪ್, 2026ರ ಅಕ್ಟೋಬರ್ 28ರಂದು ರಾತ್ರಿ ಯುವತಿ ಸ್ನಾನ ಮಾಡಿ ಮನೆಯಿಂದ ಹೊರಬಂದ ಸಂದರ್ಭದಲ್ಲಿ ಖಾರದ ಪುಡಿ ಹಾಗೂ ಬಟ್ಟೆಗಳನ್ನು ತೆಗೆದುಕೊಂಡು ಬಂದು ಆಕೆಯ ಮೇಲೆ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದ. ತಡೆಯಲು ಬಂದ ಆಕೆಯ ತಾಯಿಯ ಕಣ್ಣಿಗೂ ಖಾರದ ಪುಡಿ ಎರಚಿದ್ದ ಎಂದು ತಿಳಿಸಿದರು.

ಪ್ರದೀಪ್‌ನನ್ನು ಅಪಹರಿಸಿಲ್ಲ: ಮೂರನೇ ಘಟನೆ ವೇಳೆ ಸಂತ್ರಸ್ತ ಯುವತಿ ಆಡಿಯೊ ರೆಕಾರ್ಡ್ ಮಾಡಿಕೊಂಡಿದ್ದು, ಅದರಲ್ಲಿ ಪ್ರದೀಪ್ ತನ್ನನ್ನು ಕೊಲ್ಲಲು ಬಂದಿರುವುದಾಗಿ ಸ್ಪಷ್ಟವಾಗಿ ಹೇಳಿದ್ದಾನೆ. ಪೊಲೀಸರ ವಿಡಿಯೊ ದಾಖಲೆಯಲ್ಲಿಯೂ ಪ್ರದೀಪ್ ಇದೇ ವಿಚಾರ ತಿಳಿಸಿದ್ದಾನೆ.

ಉಡುಪಿ  : ವಿಕಲಚೇತನರ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ – vishwanews24

ಪ್ರದೀಪ್‌ನನ್ನು ಅಪಹರಿಸಿ ಮನೆಗೆ ಕರೆದುಕೊಂಡು ಬಂದು ಹಲ್ಲೆ ನಡೆಸಲಾಗಿದೆ ಎಂಬ ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ, ತನಿಖೆಯಲ್ಲಿ ಇಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ. ಪ್ರದೀಪ್ ಸಂತ್ರಸ್ತೆಯ ಮನೆಗೆ ಬಂದಿರುವುದಕ್ಕೆ ಅಗತ್ಯ ಸಾಕ್ಷ್ಯಗಳು ಲಭ್ಯವಾಗಿವೆ. ಆತ ತಂದಿದ್ದ ಬಟ್ಟೆ ಹಾಗೂ ಖಾರದ ಪುಡಿಯನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಹಿರಿಯಡ್ಕ ಎಸ್ಸೈ ವಿರುದ್ಧ ಶಿಸ್ತು ಕ್ರಮ:

ಪ್ರದೀಪ್ ಸಂತ್ರಸ್ತೆಯ ಮನೆಗೆ ಬಂದು ಕೊಲೆಗೆ ಯತ್ನಿಸಿದ ಸಂದರ್ಭದಲ್ಲಿ ಆಕೆಯ ತಾಯಿ ಸಂಬಂಧಿಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಏಳರಿಂದ ಎಂಟು ಮಂದಿ ಪ್ರದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಈ ಕುರಿತು ಪ್ರದೀಪ್ ದೂರು ನೀಡಿದ್ದರೂ ಹಿರಿಯಡ್ಕ ಠಾಣೆಯ ಎಸ್ಸೈ ನೇರವಾಗಿ ಎಫ್‌ಐಆರ್ ದಾಖಲಿಸದೆ ದೂರು ಸ್ವೀಕರಿಸಿ ಕರ್ತವ್ಯ ಲೋಪ ಎಸಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ಸೈ ವಿರುದ್ಧ ಈಗಾಗಲೇ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಪಶ್ಚಿಮ ವಲಯ ಐಜಿಪಿ ಅವರಲ್ಲಿ ವರದಿ ಮಾಡುವಂತೆ ಸೂಚಿಸಲಾಗಿದೆ ಎಂದರು.

ಹೆಚ್ಚುವರಿ ಎಸ್ಪಿ ನೇತೃತ್ವದಲ್ಲಿ ಎಸ್ಸೈ ವಿರುದ್ಧ ವಿಚಾರಣೆ ನಡೆಯುತ್ತಿದೆ. ವಿಚಾರಣೆಯಲ್ಲಿ ಮತ್ತಷ್ಟು ಕರ್ತವ್ಯ ಲೋಪ ಕಂಡುಬಂದರೆ ಹೆಚ್ಚುವರಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಇನ್ನು ಮುಂದೆ ಅವರು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸದಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಉಡುಪಿ:  ನೇರ ಸಂದರ್ಶನ – vishwanews24

ಆರೋಪಿಗಳ ಪತ್ತೆಗೆ ನಾಲ್ಕು ತಂಡಗಳ ರಚನೆ:

ಪ್ರದೀಪ್ ಪೂಜಾರಿ ಮೇಲೆ ಹಲ್ಲೆ ನಡೆಸಿದ ಹಾಗೂ ಆತನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಕ್ಕೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಈ ಪ್ರಕರಣಗಳ ತನಿಖೆಯನ್ನು ಹಿರಿಯಡ್ಕ ಠಾಣೆಯ ಬದಲಾಗಿ ಮಣಿಪಾಲ ಪೊಲೀಸ್ ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ನಡೆಸಲಾಗುತ್ತಿದೆ.

ಆರೋಪಿಗಳ ಪತ್ತೆಗಾಗಿ ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾರಿಗೂ ಕಾನೂನನ್ನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ. ಇಂತಹ ಕೃತ್ಯಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಹರಿರಾಂ ಶಂಕರ್ ಎಚ್ಚರಿಕೆ ನೀಡಿದರು.

Leave a Reply