ನವದೆಹಲಿ: ಕೃಷಿಕರಿಗೆ ವಾರ್ಷಿಕ ₹ 6000 ಆರ್ಥಿಕ ನೆರವು ನೀಡುವ ಪ್ರಧಾನಮಂತ್ರಿ ಕಿಸಾನ್ ಯೋಜನೆಯನ್ನು ಎಲ್ಲ ರೈತರಿಗೆ ವಿಸ್ತರಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೇರಿದ್ದ ಮೊದಲ ಸಂಪುಟ ಸಭೆ ಈ ನಿರ್ಧಾರವನ್ನು ತೆಗೆದುಕೊಂಡಿತು. ಬೊಕ್ಕಸಕ್ಕೆ ಇದರಿಂದ ₹ 87,000 ಕೋಟಿ ಹೊರೆ ಆಗಲಿದೆ.
ಜೊತೆಗೆ, ಸುಮಾರು ಐದು ಕೋಟಿ ರೈತರಿಗೆ ನೆರವಾಗುವಂತೆ ₹ 10,000 ಕೋಟಿ ಮೊತ್ತದ ಪಿಂಚಣಿ ಯೋಜನೆಗೂ ಸಂಪುಟವು ಅನುಮೋದನೆ ನೀಡಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದರು.
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಚುನಾವಣಾ ಪೂರ್ವದಲ್ಲಿ ಮಂಡಿಸಿದ ಮಧ್ಯಂತರ ಬಜೆಟ್‌ನಲ್ಲಿ ₹ 75,000 ಕೋಟಿ ಮೊತ್ತದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸಿದ್ಧಿ (ಪಿಎಂಕೆಎಎಸ್‌ಎಸ್) ಯೋಜನೆಯನ್ನು ಪ್ರಕಟಿಸಿತ್ತು. ವಾರ್ಷಿಕ ₹ 6,000ವನ್ನು ಮೂರು ಕಂತುಗಳಲ್ಲಿ ವಿತರಿಸಲಿದ್ದು, ಎರಡು ಹೆಕ್ಟೇರ್‌ವರೆಗೆ ಭೂಮಿ ಹೊಂದಿರುವ ಸುಮಾರು 12.5 ಕೋಟಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಇದರ ಲಾಭ ದೊರೆಯಲಿದೆ ಎಂದು ಸರ್ಕಾರ ಹೇಳಿತ್ತು.
ಪರಿಷ್ಕೃತ ತೀರ್ಮಾನದಂತೆ ಯೋಜನೆ ವ್ಯಾಪ್ತಿಗೆ ಹೆಚ್ಚುವರಿಯಾಗಿ 2 ಕೋಟಿ ರೈತರು ಸೇರುವರು. ಬೊಕ್ಕಸಕ್ಕೆ ಹೆಚ್ಚುವರಿ ₹ 12,000 ಕೋಟಿ ಹೊರೆ ಬೀಳಲಿದೆ. ಒಟ್ಟಾರೆ 14.5 ಕೋಟಿ ರೈತರಿಗೆ ಇದರ ಲಾಭ ಸಿಗಲಿದೆ.
2019–20ನೇ ಹಣಕಾಸು ವರ್ಷದಲ್ಲಿ ಈ ಯೋಜನೆ ಜಾರಿಗೆ ಒಟ್ಟು ₹ 87,217.50 ಕೋಟಿ ಬೇಕಾಗಲಿದೆ ಎಂದು ಸಚಿವರು ವಿವರ ನೀಡಿದರು.
ಅಧಿಕೃತ ಮಾಹಿತಿ ಪ್ರಕಾರ, ಯೋಜನೆಯಡಿ ಆಗಲೇ ಸುಮಾರು 3.11 ಕೋಟಿ ಸಣ್ಣ, ಅತಿ ಸಣ್ಣ ರೈತರು ಮೊದಲ ಕಂತಿನ ₹ 2,000 ಅನ್ನು ಪಿಎಂ–ಕಿಸಾನ್ ಯೋಜನೆಯಡಿ ವಿತರಿಸಲಾಗಿದೆ. 2.75 ಕೋಟಿ ರೈತರಿಗೆ ಎರಡನೇ ಕಂತಿನ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ.
ಪಿಂಚಣಿ ಯೋಜನೆಗೂ ಅಸ್ತು: ಅಲ್ಲದೆ, ಪ್ರಧಾನ ಮಂತ್ರಿ ಕಿಸಾನ್ ಪಿಂಚಣಿ ಯೋಜನೆಗೂ ಸಂಪುಟ ಸಭೆ ಅನುಮೋದನೆ ನೀಡಿತು. 60 ವರ್ಷ ವಯಸ್ಸು ಮೀರಿದ ಸಣ್ಣ ಮತ್ತು ಅತಿ ಸಣ್ಣ ಕೃಷಿ ಹಿಡುವಳಿದಾರರಿಗೆ ಮಾಸಿಕ ₹ 3000 ಪಿಂಚಣಿ ನೀಡುವುದು ಈ ಯೋಜನೆಯ ಉದ್ದೇಶ.
ವ್ಯಾಪಾರಿಗಳಿಗೆ ಪಿಂಚಣಿ: 60ವರ್ಷ ವಯಸ್ಸು ಮೀರಿದ ವ್ಯಾಪಾರಿಗಳಿಗೆ ಮಾಸಿಕ ₹ 3,000 ಪಿಂಚಣಿ ಖಾತರಿ ನೀಡುವ ಯೋಜನೆಗೂ ಸಂಪುಟ ಸಮ್ಮತಿ ನೀಡಿದೆ. ಇದರಿಂದ ಸುಮಾರು 3 ಕೋಟಿ ಚಿಲ್ಲರೆ ಮಾರಾಟಗಾರರು ಮತ್ತು ಸಣ್ಣ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.
‘ಮೂರು ವರ್ಷಗಳಲ್ಲಿ ಐದು ಕೋಟಿ ವ್ಯಾಪಾರಿಗಳು ಯೋಜನೆ ವ್ಯಾಪ್ತಿಗೆ ಸೇರುವ ನಿರೀಕ್ಷೆಯಿದೆ’ ಎಂದು ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…